Site icon MOODANA Web Edition

ಕೆಎಸ್‍ಒಯು: ಪರೀಕ್ಷಾ ಶುಲ್ಕ ಪಾವತಿಸಲು ದಿನಾಂಕ ನಿಗಧಿ

ಬೆಂಗಳೂರು, ಡಿಸೆಂಬರ್ 29, (ಕರ್ನಾಟಕ ವಾರ್ತೆ):

  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2022-23ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ವರ್ಷದ (ಜುಲೈ / ಜನವರಿ ಆವೃತ್ತಿ) ಸಿ.ಬಿ.ಸಿ.ಎಸ್. ಸ್ನಾತಕ/ಸ್ನಾತಕೋತ್ತರ ಪದವಿಗಳಾದ ಬಿ.ಬಿ.ಎ./ ಬಿ.ಸಿ.ಎ./ ಎಲ್ಲಾ ಬಿ.ಎಸ್ಸಿ./ ಎಂ.ಎ./ ಎಂ.ಕಾಂ./ ಎಂ.ಬಿ.ಎ./ ಎಲ್ಲಾ ಎಂ.ಎಸ್ಸಿ. ಕೋರ್ಸುಗಳಿಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ತೃತೀಯ ಸೆಮಿಸ್ಟರ್‍ನ ಪರೀಕ್ಷಾ ಶುಲ್ಕ ಪಾವತಿಸಲು ದಿನಾಂಕ ನಿಗಧಿಪಡಿಸಲಾಗಿದೆ.


ಪರೀಕ್ಷಾ ಶುಲ್ಕ ಪಾವತಿಸಲು ದಂಡ ಶುಲ್ಕವಿಲ್ಲದೆ ಜನವರಿ 13  ಹಾಗೂ ರೂ. 200/- ದಂಡ ಶುಲ್ಕದೊಂದಿಗೆ ಜನವರಿ 23 ಕೊನೆಯ ದಿನಾಂಕವಾಗಿದ್ದು, ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ಜಾಲತಾಣ www.ksoumysuru.ac.in  ಮೂಲಕ ಪರೀಕ್ಷಾ ಶುಲ್ಕವನ್ನು ಪಾವತಿಸಬಹುದು.


ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮಹಿಳಾ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, 4ನೇ ಮುಖ್ಯರಸ್ತೆ, 13ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-03, ದೂರವಾಣಿ ಸಂಖ್ಯೆ: 080-23448811, 9741197921, 9621395584, 7760848564 ನ್ನು ಸಂಪರ್ಕಿಸುವುದು ಎಂದು ಎಂದು ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ಶಶಿಕಲಾ.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version