Site icon MOODANA Web Edition

ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಡಿಸೆಂಬರ್ 29 (ಕರ್ನಾಟಕ ವಾರ್ತೆ):  


ರಾಮನಗರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಕಾರರು ಗ್ರೇಡ್- III, ಬೆರಳಚ್ಚುಗಾರರು ಮತ್ತು ಬೆರಳಚ್ಚು – ನಕಲುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಶೀಘ್ರಲಿಪಿಕಾರರು ಗ್ರೇಡ್- III, ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಹಾಗೂ ಕನ್ನಡ ಹಾಗೂ ಆಂಗ್ಲ ಲಿಪಿ ಪ್ರೌಢ ದರ್ಜೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟ್ರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಗಳ ಬೆರಳಚ್ಚು ಪ್ರೌಢ ದರ್ಜೆ ಹಾಗೂ ಶೀಘ್ರಲಿಪಿ ಪ್ರೌಢ ದರ್ಜೆ ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಬೆರಳಚ್ಚುಗಾರರು, ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟ್ರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಗಳ ಬೆರಳಚ್ಚು ಪ್ರೌಢ ದರ್ಜೆ ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಬೆರಳಚ್ಚು – ನಕಲುಗಾರರ, ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟ್ರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಗಳ ಬೆರಳಚ್ಚು ಕಿರಿಯ ದರ್ಜೆ ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ನಿಗದಿತ ಅರ್ಜಿ ಶುಲ್ಕ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200/-, ಪ್ರವರ್ಗ -2ಎ, 2ಬಿ, 3ಎ, ಮತ್ತು 3 ಬಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 100/- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನಾಂಕವಾಗಿದ್ದು, ಆನ್‍ಲೈನ್‍ನಲ್ಲಿ ಶುಲ್ಕ ಪಾವತಿಸಲು ಜನವರಿ 23 ಕೊನೆಯ ದಿನಾಂಕವಾಗಿದೆ.


ಹೆಚ್ಚಿನ ಮಾಹಿತಿಗಾಗಿ ನ್ಯಾಯಾಲಯದ ಅಧಿಕೃತ ಜಾಲತಾಣ https://ramanagara.dcorts.gov.in/online-recruitment/   ಗೆ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Exit mobile version