ಬೆಂಗಳೂರು, ಡಿಸೆಂಬರ್ 29 (ಕರ್ನಾಟಕ ವಾರ್ತೆ):
ಬೆಂಗಳೂರು ಉತ್ತರ ಜಿಲ್ಲೆಯ ಗೃಹ ರಕ್ಷಕ ದಳದಲ್ಲಿ ಖಾಲಿ ಇರುವ ಸ್ವಯಂ ಸೇವಕ ಗೃಹ ರಕ್ಷಕರ ಹುದ್ದೆಗಳಿಗೆ ಡಿಸೆಂಬರ್ 30 ರಿಂದ ಜನವರಿ 5 ರವರೆಗೆ ಮಧ್ಯಾಹ್ನ 2.30 ರಿಂದ 5 ಗಂಟೆಯವರೆಗೆ ಸಮಾದೇಷ್ಟರ ಕಚೇರಿ, ಗೃಹರಕ್ಷಕ ದಳ, ಬೆಂಗಳೂರು ಉತ್ತರ ಜಿಲ್ಲೆ, ವೆಸ್ಟ್ ಆಫ್ ಕಾರ್ಡ್ ರಸ್ತೆ, ಅಗ್ನಿಶಾಮಕ ಠಾಣೆ ಪಕ್ಕ, ರಾಜಾಜಿನಗರ ಇಲ್ಲಿ ಉಚಿತವಾಗಿ ಅರ್ಜಿಗಳನ್ನು ವಿತರಿಸಲಾಗುವುದು.
ಅರ್ಜಿ ಸಲ್ಲಿಸಲು 10 ನೇ ತರಗತಿ ಉತ್ತೀರ್ಣರಾಗಿರಬೇಕು. 19 ವರ್ಷ ವಯಸ್ಸು ತುಂಬಿರಬೇಕು. ದೈಹಿಕ ಅರ್ಹತೆಯನ್ನು ಹೊಂದಿರಬೇಕು. ಕಂಪ್ಯೂಟರ್ ಟೈಪಿಂಗ್ ಕನ್ನಡ ಮತ್ತು ಇಂಗ್ಲೀಷ್, ಡ್ರೈವರ್ಸ್, ಅಡುಗೆ ಭಟ್ಟರು, ಕಾರ್ಪೆಂಟರು, ಎಲೆಕ್ಟ್ರೀಷಿಯನ್, ಪೈಂಟರ್ ಮತ್ತು ಪ್ಲಂಬರ್ ಇತ್ಯಾದಿ ಕೌಶಲ್ಯ ತರಬೇತಿ ಹೊಂದಿರಬೇಕು. ಅರ್ಜಿ ಪಡೆಯಲು ಜನ್ಮ ದಿನಾಂಕವುಳ್ಳ ಶಾಲೆಯ ಮೂಲ ಟಿ.ಸಿ. ಅಥವಾ ಮೂಲ ಅಂಕಪಟ್ಟಿ ತರಬೇಕು.
ಗೃಹರಕ್ಷಕದಳದ ಸಂಸ್ಥೆಯು ಸ್ವಯಂ ಸೇವಕ ಸಂಸ್ಥೆಯಾಗಿದ್ದು, ಈ ಸಂಸ್ಥೆಯಲ್ಲಿ 03 ವರ್ಷಗಳ ಅವಧಿಗೆ ಮಾತ್ರ ಸೇವೆ ಸಲ್ಲಿಸಬಹುದಾಗಿರುತ್ತದೆ. ಇದು ಖಾಯಂ ನೌಕರಿಯಾಗಿರುವುದಿಲ್ಲ. ಯಾವುದೇ ರೀತಿಯ ಮಾಸಿಕ / ವಿಶೇಷ ಭತ್ಯೆಗಳನ್ನು ಸಂಸ್ಥೆಯು ನೀಡುವುದಿಲ್ಲ. ಸರ್ಕಾರವು ನಿಗಧಿಪಡಿಸಿರುವ ಗೌರವಧನವನ್ನು ಕರ್ತವ್ಯ ನಿರ್ವಹಿಸುವ ಅವಧಿಗೆ ಮಾತ್ರ ಪಾವತಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.