ಬೆಂಗಳೂರು, ಡಿಸೆಂಬರ್ 29 (ಕರ್ನಾಟಕ ವಾರ್ತೆ):
ಬೆಂಗಳೂರು ವಿಶ್ವವಿದ್ಯಾಲಯದ ಹಿಂದುಳಿದ ವರ್ಗಗಳ ಕೋಶದ ವತಿಯಿಂದ ಯುಜಿಸಿ/ಎನ್‍ಇಟಿ/ ಕೆಸೆಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮವನ್ನು ಡಿಸೆಂಬರ್ 30 ರಂದು ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರು ವಿಶ್ವವಿದ್ಯಾಲಯದ ಜಿ.ಎಸ್.ಎಸ್.ಸಭಾಂಗಣ, ಕನ್ನಡ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ.ಜಯಕರ ಎಸ್.ಎಂ. ಅವರು ವಹಿಸÀಲಿದ್ದಾರೆ. ನಗರಾಭಿವೃದ್ಧಿ ಸಚಿವರ ಆಪ್ತ ಕಾರ್ಯದರ್ಶಿಗಳಾದ ಎನ್.ಮಹೇಶ್ ಬಾಬು, ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾದ ಶೇಕ್ ಲತೀಪ್ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ನೋಡಲ್ ಅಧಿಕಾರಿಯಾದ ಮಂಜುನಾಥ.ಬಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾದ ಪ್ರೊ.ಮುನಿಯಪ್ಪ ಅವರು ಉಪಸ್ಥಿತಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಹಿಂದುಳಿದ ವರ್ಗಗಳ ಕೋಶದ ಪ್ರಾಧ್ಯಾಪಕರು ಹಾಗೂ ವಿಶೇಷ ಅಧಿಕಾರಿಗಳಾದ ಪ್ರೊ.ಡಿ.ಕೆ.ಚಿತ್ತಯ್ಯ ಪೂಜಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.