ಬೆಂಗಳೂರು, ಡಿಸೆಂಬರ್ 30, (ಕರ್ನಾಟಕ ವಾರ್ತೆ) :
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಲಾದ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ (ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿ) ಎಲೆಕ್ಟ್ರೀಷಿಯನ್ ಗ್ರೇಡ್-1, 02 (ಹೈ.ಕ), ಎಲೆಕ್ಟ್ರೀಷಿಯನ್ ಗ್ರೇಡ್-2, 10 (ಹೈ.ಕ) ಹುದ್ದೆಗಳ ಡಿಸೆಂಬರ್ 27 ರಂದು, ಜಲಸಂಪನ್ಮೂಲ ಇಲಾಖೆಯ ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗಳ 166 (ಹೈ.ಕ) ತಾತ್ಕಾಲಿಕ ಆಯ್ಕೆಪಟ್ಟಿ ಮತ್ತು ಕಟ್‍ಆಪ್ ಅಂಕಗಳನ್ನು ಡಿಸೆಂಬರ್ 28 ರಂದು ಆಯೋಗದ ಜಾಲತಾಣ http://kpsc.kar.nic.in/Lists ನÀಲ್ಲಿ ಪ್ರಕಟಿಸಿದೆ.
ತಾತ್ಕಾಲಿಕ ಆಯ್ಕೆಪಟ್ಟಿಗಳಿಗೆ ಕುರಿತಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಆಯ್ಕೆಪಟ್ಟಿ ಪ್ರಕಟಿಸಿದ ದಿನಾಂಕದಿಂದ 07 ದಿನಗಳೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು – 560001 ಇವರಿಗೆ ಸಂಬಂಧಿತ ಹುದ್ದೆಯ ಹೆಸರನ್ನು ಸ್ಪಷ್ಟವಾಗಿ ನಮೂದಿಸಿ ಲಿಖಿತ ರೂಪದಲ್ಲಿ ಸಲ್ಲಿಸಬೇಕು.
ಈ ಹುದ್ದೆಗಳಿಗೆ ಆಯ್ಕೆಯಾಗಲು ಇಚ್ಛಿಸದ ಅಭ್ಯರ್ಥಿಗಳು ಸ್ವ-ಇಚ್ಚಾ ಹೇಳಿಕೆಯನ್ನು ಆಯ್ಕೆಪಟ್ಟಿ ಪ್ರಕಟಿಸಿದ ದಿನಾಂಕದಿಂದ 07 ದಿನಗಳೊಳಗಾಗಿ “ಕಾರ್ಯದರ್ಶಿ” ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು – 560001, ಇವರಿಗೆ ಲಿಖಿತವಾಗಿ ಸ್ವ-ಇಚ್ಚಾ ಹೇಳಿಕೆಯನ್ನು ಸಲ್ಲಿಸಬೇಕು. ಆನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಲತಾ ಕುಮಾರಿ ಕೆ.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.