Site icon MOODANA Web Edition

“Statistical Data Analysis for Research Work” ವಿಷಯದ ಕುರಿತು ಐದು ದಿನಗಳ ಕಾರ್ಯಾಗಾರ

ಬೆಂಗಳೂರು, ಡಿಸೆಂಬರ್ 30 (ಕರ್ನಾಟಕ ವಾರ್ತೆ):

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು “Statistical Data Analysis for Research Work” ಎಂಬ ವಿಷಯದ ಕುರಿತು ಐದು ದಿನಗಳ ಕಾರ್ಯಾಗಾರವನ್ನು ಪ್ರೊ.ಯು.ಆರ್.ರಾವ್, ವಿಜ್ಞಾನ ಭವನ, ಮೇ. ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕಾ ವಿಜ್ಞಾನಗಳ ಕಾಲೇಜು ಆವರಣ, ಜಿಕೆವಿಕೆ, ದೊಡ್ಡಬೆಟ್ಟಹಳ್ಳಿ ಲೇಔಟ್, ವಿದ್ಯಾರಣ್ಯಪುರ ಅಂಚೆ, ಬೆಂಗಳೂರು ಇಲ್ಲಿ ಆಯೋಜಿಸಿದೆ.

ಕಾರ್ಯಾಗಾರದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ ವಿಜ್ಞಾನಿಗಳು ಉಪನ್ಯಾಸಗಳನ್ನು ನೀಡಲಿದ್ದಾರೆ. ಈ ಕಾರ್ಯಾಗಾರದಲ್ಲಿ ಪ್ರತಿನಿಧಿಗಳಾಗಿ ರಾಜ್ಯಾದ್ಯಂತ ಸ್ನಾತಕೋತ್ತರ ವಿಜ್ಞಾನ ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜು ಅಧ್ಯಾಪಕರು ಹಾಗೂ ಯುವ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.

ಈ ಕಾರ್ಯಾಗಾರಕ್ಕೆ ನೋಂದಾಯಿಸಿಕೊಳ್ಳಲು ಅಕಾಡೆಮಿಯ ಜಾಲತಾಣ http://www.kstacademy.in  ದಿಂದ ಪಡೆಯಬಹುದಾಗಿದೆ. ಮೊದಲು ನೋಂದಾಯಿಸಿಕೊಂಡವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.

ಕಾರ್ಯಾಗಾರದಲ್ಲಿ ಪ್ರತಿನಿಧಿಗಳಾಗಿ ನೋಂದಾಯಿಸಿಕೊಳ್ಳಲು 2024ರ ಜನವರಿ 16 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ವೈಜ್ಞಾನಿಕಾಧಿಕಾರಿ ವಿ.ಕೆ. ಶ್ರೀನಿವಾಸು ಮೊ.ಸಂ. 9620767819 ಕ್ಕೆ ಸಂಪರ್ಕಿಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version