ಹುಬ್ಬಳ್ಳಿ (ಕರ್ನಾಟಕವಾರ್ತೆ)ಜ.02 : ಪ್ರತಿ ವರ್ಷದಂತೆ ಈ ವರ್ಷವು ಜನವರಿ 26 ರಂದು ಹುಬ್ಬಳ್ಳಿ ನೆಹರು ಮೈದಾನದಲ್ಲಿ ಸಾರ್ವಜನಿಕ ಗಣರಾಜ್ಯೋತ್ಸವ ವಿಜೃಂಭನೆಯಿಂದ ಆಚರಿಸಲು ತಿರ್ಮಾನಿಸಲಾಗಿದೆ.
ಈ ಬಗ್ಗೆ ಚರ್ಚಿಸಲು ಜನವರಿ 06ರಂದು ಸಂಜೆ 4 ಗಂಟೆಗೆ ಹುಬ್ಬಳ್ಳಿ ತಹಶೀಲ್ದಾರ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ. ಸಂಬಂಧಿಸಿದ ಅಧಿಕಾರಿಗಳು ಖುದ್ದು ಹಾಜರಾಗಲು ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಹಶೀಲ್ದಾರ್ ಅವರು ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.