ಹುಬ್ಬಳ್ಳಿ ( ಕರ್ನಾಟಕ ವಾರ್ತೆ) ಜ.6 ಪ್ರತಿ ವರ್ಷದಂತೆ ಈ ವರ್ಷವು ಜನವರಿ 26 ರಂದು ಹುಬ್ಬಳ್ಳಿ ನೆಹರು ಮೈದಾನದಲ್ಲಿ ಸಾರ್ವಜನಿಕ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದು ಹುಬ್ಬಳ್ಳಿ ಶಹರ ತಹಸೀಲ್ದಾರರಾದ ಕಲಗೌಡ ಪಾಟೀಲ ಹೇಳಿದರು.
ಇಂದು ತಹಶೀಲ್ದಾರ ಕಾರ್ಯಾಲಯದಲ್ಲಿ ನಡೆದ ತಾಲೂಕ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಅಂದು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹನವನ್ನು ನೆರವೇರಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು. ವಿವಿಧ ಇಲಾಖೆಗಳಿಗೆ ವಹಿಸಿದ ಕಾರ್ಯಗಳನ್ನು ತಪ್ಪದೇ ನಿರ್ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರರಾದ ಪ್ರಕಾಶ ನಾಶಿ, ಸೇರಿದಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.




