Site icon MOODANA Web Edition

ಜ.08 ರಂದು ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ, ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಪಲ್ಲಕ್ಕಿ ಬಸ್‍ಗಳ ಲೋಕಾರ್ಪಣೆ

ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಜ.6 : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಧಾರವಾಡ ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ, ಶಂಕು ಸ್ಥಾಪನೆ, ಹುಬ್ಬಳ್ಳಿ ಗೋಕುಲ್ ರಸ್ತೆಯ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಪಲ್ಲಕ್ಕಿ ಬಸ್‍ಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಜ.8ರಂದು ಬೆಳಿಗ್ಗೆ 10 ಗಂಟೆಗೆ ಹುಬ್ಬಳ್ಳಿ ಗೋಕುಲ್ ರಸ್ತೆಯ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಲ್ಹಾದ ಜೋಶಿ, ವಿಧಾನ ಪರಿಷತ್‍ನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಹಾಗೂ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋμï.ಎಸ್. ಲಾಡ್ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಉದ್ಘಾಟಕರಾಗಿ ಆಗಮಿಸುವರು. ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ ವಿಶೇಷ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಮಹೇಶ ಟೆಂಗಿನಕಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಶಾಸಕರಾದ ಜಗದೀಶ ಶೆಟ್ಟರ, ವಿನಯ ಕುಲಕರ್ಣಿ, ಅಬ್ಬಯ್ಯ ಪ್ರಸಾದ, ಅರವಿಂದ ಬೆಲ್ಲದ, ಎನ್.ಎಚ್.ಕೋನರಡ್ಡಿ, ಎಸ್.ವಿ.ಸಂಕನೂರ,ಪ್ರದೀಪ ಶೆಟ್ಟರ, ಎಂ.ಆರ್.ಪಾಟೀಲ ಹಾಗೂ ಪಾಲಿಕೆಯ ಮಹಾಪೌರರಾದ ವೀಣಾ ಭರದ್ವಾಡ ಅವರು ಮುಖ್ಯ ಅಥಿತಿಗಳಾಗಿ ಆಗಮಿಸುವರು ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಭರತ್.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version