28.6 C
Karnataka
Thursday, February 6, 2025
spot_img

ಪ್ರಗತಿ ಪರಿಶೀಲನಾ ಸಭೆ – ಪ್ರಗತಿ ಹಂತದಲ್ಲಿರುವ ಎಲ್ಲ ಕಾರ್ಯಗಳನ್ನು ಶೀಘ್ರ ಗತಿಯಲ್ಲಿ ಪೂರ್ಣಗೊಳಿಸಬೇಕು.

ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಜ.5: ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಕೈಜೋಡಿಸಿ ಪ್ರಗತಿ ಹಂತದಲ್ಲಿರುವ ಎಲ್ಲ ಕಾರ್ಯಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಿ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿಗಳಾದ ದೀಪಕ ಮಡಿವಾಳರ ಹೇಳಿದರು.
ಇಂದು ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯತ ಸಭಾಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಅವರು ಮಾತನಾಡಿದರು.
ಹುಬ್ಬಳ್ಳಿ ಶಹರ ಹಾಗೂ ಗ್ರಾಮೀಣ ಕ್ಷೇತ್ರ ಶಿಕ್ಷಣ ಇಲಾಖೆಯು ಎಲ್ಲಾ ವರ್ಗದ ಮಕ್ಕಳಿಗೆ ಸಮವಸ್ತ್ರ, ಪಠ್ಯ ಪುಸ್ತಕಗಳ ವಿತರಣಾ ಕಾರ್ಯವನ್ನು ನಿಗಧಿತ ಸಮಯದಲ್ಲಿ ಕೈಗೊಳ್ಳಬೇಕು. ಉತ್ತಮ ಗುಣಮಟ್ಟದ ಶೂಗಳನ್ನು ಖರೀದಿಸಿ ಮಕ್ಕಳಿಗೆ ನೀಡಬೇಕು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯವನ್ನು ನಿರ್ಮಿಸಿ ಸ್ವಚ್ಛತೆಯನ್ನು ಕಾಪಾಡಬೇಕು. ತಾಲೂಕಾ ಮಟ್ಟದಲ್ಲಿ ಸಾಕ್ಷಾರತಾ ಸಮೀಕ್ಷೆ ಕೈಗೊಂಡು ಶೀಘ್ರಗತಿಯಲ್ಲಿ ವರದಿಯನ್ನು ಸಲ್ಲಿಸಬೇಕು ಎಂದು ಹೇಳಿದರು
ಎಲ್ಲಾ ಪಿ.ಡಿ.ಒ. ಗಳು ಎಸ್.ಸಿ ಮತ್ತು ಎಸ್.ಟಿ.ಗಳಿಗೆ 25% ಅನುದಾನದಲ್ಲಿ ಖರ್ಚು ಮಾಡಿದ ವಿವರಗಳನ್ನು ಸಮಾಜ ಕಲ್ಯಾಣ ಇಲಾಖೆ ಮಾಹಿತಿ ನೀಡಬೇಕು.
ಬರಗಾಲದ ಪರಿಸ್ಥಿತಿ ಉಂಟಾಗುವುದರಿಂದ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಗಳಿಗೆ ವ್ಯವಸ್ಥಿತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಎಲ್ಲ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ,ಕೆರೆ, ಹಳ್ಳಗಳ ನೀರನ್ನು ಪರಿಶೀಲಿಸಬೇಕು. ಈ ವರ್ಷ ಮಳೆಯ ಪ್ರಮಾಣ ಕಡಿಮೆ ಇರುವುದರಿಂದ ಎಲ್ಲೆಡೆ ಕುಡಿಯುವ ನೀರಿನ ಅಭಾವ ಕಂಡುಬಂದಿದ್ದು, ನೀರನ್ನು ನಿಯಮಿತ ಮತ್ತು ಸುವ್ಯವಸ್ಥಿತವಾಗಿ ಸರಬರಾಜುಗೊಳಿಸಬೇಕು ಎಂದು ಹೇಳಿದರು.
ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ 8-10 ಶೌಚಾಲಯಗಳನ್ನು ನಿರ್ಮಿಸಬೇಕು. ಸರ್ಕಾರ ನೀಡಿದ ಸೌಕರ್ಯಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು. ಕೊಠಡಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ವಸತಿ ನಿಲುಯದ ಸಿಬ್ಬಂದಿಗಳು ಜಾಗೃತಿವಹಿಸಬೇಕು. ವಿದ್ಯಾರ್ಥಿಗಳ ಆರೋಗ್ಯದ ಕಡೆಗೆ ಹೆಚ್ಚು ಒತ್ತು ಕೊಡಬೇಕು. ವಿದ್ಯಾರ್ಥಿಗಳ ಪರೀಕ್ಷೆಗೆ ತೊಂದರೆಯಾಗದಂತೆ ಹೆಸ್ಕಾಂ ವಿದ್ಯುತ್ ಸರಬರಾಜನ್ನು ಪೂರೈಸಬೇಕೆಂದು ಸೂಚಿಸಿದರು.
ಕೊರೊನಾ ಸಂಖ್ಯೆ ಮತ್ತೆ ಹೆಚ್ಚುತ್ತಿರುವುದರಿಂದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಆರೋಗ್ಯ ಅಧಿಕಾರಿಗಳಿಗೆ ಹೇಳಿದರು.
ಒಟ್ಟು 30 ಕಿಮೀ ರಸ್ತೆ ಮಾರ್ಗಗಳಲ್ಲಿ ನೆಡುತೋಪು ನಿರ್ಮಾಣದ ಗುರಿಯನ್ನು ಹೊಂದಿದ್ದು, ಬುಡ್ನಾಳ, ಚನ್ನಾಪೂರ, ರಾಯನಾಳ, ಕೇಶ್ವಾಪೂರ ರೈಲ್ವೆ ಬ್ರೀಜ್‍ನಿಂದ ಕುಸುಗಲ್ ರಸ್ತೆಯಲ್ಲಿ ನೆಡುತೋಪು ನಿರ್ಮಾಣ ಪೂರ್ಣಗೊಂಡಿದೆ. ದೇವರ ಗುಡಿಯಾಳ, ಯರೇ ಬುದಿಹಾಳ ಕ್ರಾಸ್‍ನಿಂದ ಬಸಾಪೂರ ರಸ್ತೆ, ಹುಬ್ಬಳ್ಳಿ ಗದಗ ರಸ್ತೆ ಮಾರ್ಗವಾಗಿ 3 ಕಿಮೀ ರಸ್ತೆಯಲ್ಲಿ ನೆಡುತೋಪು ನಿರ್ವಹಣೆ ಪ್ರಗತಿಯಲ್ಲಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಮನರೇಗಾ ಯೋಜನೆಯಡಿ ಸಸಿನೆಡುವ ಕಾರ್ಯದಲ್ಲಿ ಸ್ಥಳೀಯ ನೌಕರನ್ನು ಬಳಸಿಕೊಳ್ಳಬೇಕು ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರ ಹೊಸಮನಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಗೋವಿನ ಜೋಳ ಕಟಾವು ಪ್ರಕ್ರಿಯೆ ಶುರುವಾಗಲಿದೆ. ಮಳೆಯ ಕೊರತೆಯಿಂದ ಜಾನುವಾರುಗಳಿಗೆ ಮೇವಿನ ಅಭಾವ ಕಂಡುಬಂದಿದ್ದು, ದನಕರುಗಳಿಗೆ ಮೇವು ಒದಗಿಸಲು ರೈತರು ಗೋವಿನ ಜೋಳದ ಬೆಳೆಗೆ ಮಿಷನ್ ಬಳಸದಂತೆ ರೈತರಿಗೆ ಸೂಚನೆ ನೀಡಿ ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಬಿಪಿಎಲ್ ರೇಷನ್ ಕಾರ್ಡ್ ಬಳಕೆದಾರರಿಗೆ ರಾಜ್ಯ ಸರ್ಕಾರವು ಅಕ್ಕಿಗೆ ಪರ್ಯಾಯವಾಗಿ ನೀಡಲಾಗುತ್ತಿರುವ ಹಣವು ಫಲಾನುಭವಿಗಳ ಖಾತೆಗೆ ಜಮೆಯಾಗುತ್ತಿರುವ ಬಗ್ಗೆ ಪರೀಶೀಲಿಸಿ. ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆಯನ್ನು ಶೀಘ್ರಗತಿಯಲ್ಲಿ ಪ್ರಾರಂಬಿಸಬೇಕು ಎಂದು ಆಹಾರ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.
ಎಸ್‍ಸಿಎಸ್‍ಟಿ ಸಮುದಾಯದ ರೈತರಿಗೆ ಗಂಗಾ ಕಲ್ಯಾಣ ಯೋಜನೆಯಡಿ ಯತವತ್ತಾಗಿ ಬೋರ್‍ವೆಲ್ ವ್ಯವಸ್ಥೆ ಕಲ್ಪಿಸಿಕೊಡಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಡಿ ಎಲ್ಲ ಮನೆಗಳಿಗೆ ಉಚಿತ ವಿದ್ಯುತ್ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ.
ತಾಲ್ಲೂಕಿನಲ್ಲಿ ಒಟ್ಟು 155 ಅಂಗನವಾಡಿ ಕೇಂದ್ರಗಳಿದ್ದು, ಇದರಲ್ಲಿ 123 ಸ್ವಂತ ಕಟ್ಟಡವುಳ್ಳ ಅಂಗನವಾಡಿ ಕೇಂದ್ರಗಳಿವೆ. ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಹಾಗೂ ವಿದ್ಯುತ್ ಹಾಗೂ ಪ್ಯಾನ ವ್ಯವಸ್ಥೆ ಮಾಡಿಕೊಡಬೇಕು. ಹೆಬಸೂರಿನಲ್ಲಿ ಯೋಗಕೇಂದ್ರ, ಶಿರಗುಪ್ಪಿಯಲ್ಲಿ ರೈತ ಸಂಪರ್ಕ ಕೇಂದ್ರ ಹಾಗೂ 13 ಅಂಗನವಾಡಿ ಕಟ್ಟಡಗಳನ್ನು ದುರಸ್ಥಿಗೊಳಿಸಲಾಗುವುದು ಎಂದರು.
ಸಭೆಯಲ್ಲಿ ಪಂಚಾಯತ ರಾಜ್ ಇಲಾಖೆಯ ಸಹಾಯಕ ನಿರ್ದೇಶಕರಾದ ಚಂದ್ರಶೇಖರ ಕುರ್ತಕೋಟಿ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಕರವೀರಮಠ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರರಾದ ಜಗದೀಶ ಪಾಟೀಲ ಇತರೆ ಎಲ್ಲ ತಾಲೂಕ ಮಟ್ಟದ ಅಧಿಕಾರಿಗಳು ಉಸ್ಥಿತರಿದ್ದರು.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Related Articles

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!