31.7 C
Karnataka
Wednesday, February 5, 2025
spot_img

ರಾಷ್ಟ್ರೀಯ ಲೋಕ್ – ಅಧಾಲತ್

ಬೆಂಗಳೂರು, ಜನವರಿ 05 (ಕರ್ನಾಟಕ ವಾರ್ತೆ):

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯಾದ್ಯಂತ ರಾಷ್ಟ್ರೀಯ  ಲೋಕ್ ಅದಾಲತ್‍ನ್ನು ಜನವರಿ 09 ರಂದು ಹಮ್ಮಿಕೊಳ್ಳಲಾಗಿದ್ದು, ಈ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು,  ಬ್ಯಾಂಕ್ ವೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಇತ್ಯಾದಿ) ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು (ರೇರಾ),  ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು,  ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆ.ಇ.ಆರ್.ಸಿ). ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು ಇತ್ಯರ್ಥ ಪಡಿಸಿಕೊಳ್ಳಬಹುದು.

ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದು.

ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.  ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.

ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ್‍ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು ಭೌತಿಕ ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುತ್ತಲಿವೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಕೇಂದ್ರ ದ ದೂರವಾಣಿ ಸಂಖ್ಯೆ 1800-425-90900ನ್ನು ಸಂಪರ್ಕಿಸಬಹುದು. ಅಥವಾ  ನ್ಯಾಯ ದೇಗುಲ, ಮೊದಲನೆ ಮಹಡಿ, ಹೆಚ್ ಸಿದ್ಧಯ್ಯ ರಸ್ತೆ, ಬೆಂಗಳೂರು, ದೂರವಾಣಿ ಸಂಖ್ಯೆ : 080-22111875, 080-22111730, ಸಾಮಾಜಿಕ ಜಾಲತಾಣ www.kslsa.kar.nic.in ನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Related Articles

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!