ಬೆಂಗಳೂರು, ಜನವರಿ 09 (ಕರ್ನಾಟಕ ವಾರ್ತೆ):
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ಕಾನೂನು ಸಲಹೆಗಾರರು / ಸಮಾಲೋಚಕರ ಸೇವೆಯನ್ನು ಪಡೆಯಲು ಅರ್ಹ ವಕೀಲರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕಾನೂನು ಸಲಹೆಗಾರರ 01 ಹುದ್ದೆಗೆ, ಅರ್ಜಿ ಸಲ್ಲಿಸಲು ಕೆ.ಎ.ಟಿ/ ಉಚ್ಛನ್ಯಾಯಾಲಯದಲ್ಲಿ ವಕೀಲರಾಗಿ ಕನಿಷ್ಠ 15 ರಿಂದ 20 ವರ್ಷಗಳ ಅನುಭವ ಹೊಂದಿರಬೇಕು. ಕಾನೂನು ಸಮಾಲೋಚಕರ 02 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆ.ಎ.ಟಿ/ ಉಚ್ಛನ್ಯಾಯಾಲಯದಲ್ಲಿ ವಕೀಲರಾಗಿ ಕನಿಷ್ಠ 3 ರಿಂದ 10 ವರ್ಷಗಳ ಅನುಭವ ಹೊಂದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜಾಲತಾಣ https://hfwcom.karnataka.gov.in ಗೆ ಸಂಪರ್ಕಿಸಬಹುದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.