ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಜ.9: ತಾಲೂಕು ಆಡಳಿತದಿಂದ ಜನೇವರಿ 15 ರಂದು ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿಯನ್ನು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಜಯಂತಿ ಪೂರ್ವಭಾವಿ ಸಭೆಯನ್ನು ಜನೇವರಿ 11 ರಂದು ಬೆಳಿಗ್ಗೆ 11.30 ಗಂಟೆಗೆ ತಹಸೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ತಾಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು, ಸಮಾಜದ ಮುಖಂಡರು, ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆಗೆ ಹಾಜರಾಗಿ ಸೂಕ್ತ ಸಲಹೆ ಸೂಚನೆ ನೀಡಬೇಕೆಂದು ಹುಬ್ಬಳ್ಳಿ ಶಹರ ತಹಸೀಲ್ದಾರರಾದ ಕಲಗೌಡ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.