Site icon MOODANA Web Edition

ಜ.12 ರಂದು ಮಹಾಯೋಗಿ ಶ್ರೀ ವೇಮನ ಹಾಗೂ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಪೂರ್ವಭಾವಿ ಸಭೆ

ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಜ.9: ತಾಲೂಕು ಆಡಳಿತದಿಂದ ಜನೇವರಿ 19 ರಂದು ಮಹಾಯೋಗಿ ಶ್ರೀ ವೇಮನ ಜಯಂತಿಯನ್ನು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಜಯಂತಿ ಪೂರ್ವಭಾವಿ ಸಭೆಯನ್ನು ಜನೇವರಿ 12 ರಂದು ಬೆಳಿಗ್ಗೆ 11.30 ಗಂಟೆಗೆ ಹಾಗೂ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಪೂರ್ವಭಾವಿ ಸಭೆಯನ್ನು ಮಧ್ಯಾಹ್ನ 12.30 ಕ್ಕೆ ತಹಸೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ತಾಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು, ಸಮಾಜದ ಮುಖಂಡರು, ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆಗೆ ಹಾಜರಾಗಿ ಸೂಕ್ತ ಸಲಹೆ ಸೂಚನೆ ನೀಡಬೇಕೆಂದು ಹುಬ್ಬಳ್ಳಿ ಶಹರ ತಹಸೀಲ್ದಾರರಾದ ಕಲಗೌಡ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version