Site icon MOODANA Web Edition

ಅರೆಕಾಲಿಕ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು, ಜನವರಿ 10 (ಕರ್ನಾಟಕ ವಾರ್ತೆ):

ಬೆಂಗಳೂರು ಎಸ್.ಜೆ. ಸರ್ಕಾರಿ ಪಾಲಿಟೆಕ್ನಿಕ್, ಹಾಗೂ ಎಂ.ಇ.ಐ. ಪಾಲಿಟೆಕ್ನಿಕ್ ಇಲ್ಲಿಗೆ 2023-24ನೇ ಸಾಲಿನ ಡಿಪ್ಲೋಮಾ ಲ್ಯಾಟರಲ್ ಎಂಟ್ರಿ ಸ್ಕೀಮ್ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಅರೆಕಾಲಿಕ (ಪಾರ್ಟ್ ಟೈಮ್) ಪ್ರವೇಶ ಅರ್ಜಿ ಸ್ವೀಕೃತಿ ಪ್ರಕ್ರಿಯೆಯು  ಜನವರಿ 4 ರಿಂದ 18 ರವರೆಗೆ ನಡೆಯಲಿದೆ.
 
ಆಸಕ್ತ ಅರ್ಹ ಅಭ್ಯರ್ಥಿಗಳು ಪ್ರವೇಶ ಅರ್ಜಿಯನ್ನು dte.karnataka.gov.in or dtetech.karnataka.gov.in/kartechnical  ಮೂಲಕ ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಜನವರಿ 18 ರೊಳಗಾಗಿ ಸಲ್ಲಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Exit mobile version