Site icon MOODANA Web Edition

ಶಿವಮೊಗ್ಗ : ಯುವ ಯೋಜನೆಗೆ ಚಾಲನೆ

ಬೆಂಗಳೂರು, ಜನವರಿ 10 (ಕರ್ನಾಟಕ ವಾರ್ತೆ):

ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರೂಪಿಸಲಾಗಿರುವ ಸರ್ಕಾರದ ಗ್ಯಾರೆಂಟಿ ಯೋಜನೆಯಾದ ‘ಯುವನಿಧಿ’ ಯೋಜನೆಯ ಫಲಾನುಭವಿಗಳಿಗೆ ಸ್ವಾಮಿ ವಿವೇಕಾನಂದರ ಜಯಂತಿಯ ದಿನದಂದು ನೇರ ನಗದು ವರ್ಗಾವಣೆ ಮೂಲಕ ನಿರುದ್ಯೋಗ ಭತ್ಯೆ ಪಾವತಿ ಚಾಲನಾ ಕಾರ್ಯಕ್ರಮಕ್ಕೆ ಶಿವಮೊಗ್ಗದ ಪ್ರೀಡಂ ಪಾರ್ಕ್ (ಹಳೆ ಜೈಲು ಆವರಣ)ನಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜನವರಿ 12 ರಂದು ಅಪರಾಹ್ನ 12.30 ಗಂಟೆಗೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಪರಿಷತ್‍ನ ಸಭಾಪತಿಗಳಾದ ಬಸವರಾಜ ಎಸ್ ಹೊರಟ್ಟಿ, ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಶರಣಪ್ರಕಾಶ ರುದ್ರಪ್ಪ ಪಾಟೀಲ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ, ಇಂಧÀನ ಸಚಿವರಾದ ಕೆ.ಜೆ.ಜಾರ್ಜ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಜವಳಿ ಸಚಿವರಾದ ಶಿವಾನಂದ ಪಾಟೀಲ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾದ ಡಿ.ಸುಧಾಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಬಿ.ನಾಗೇಂದ್ರ, ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವರಾದ ಲಕ್ಷ್ಮಿ ಆರ್. ಹೆಬ್ಬಾಳ್‍ಕರ್, ಉನ್ನತ ಶಿಕ್ಷಣ ಇಲಾಖೆ ಸಚಿವರಾದ ಎಂ.ಸಿ.ಸುಧಾಕರ್, ವಿಧಾನಪರಿಷತ್‍ನ ವಿರೋಧ ಪಕ್ಷದ ನಾಯಕರಾದ ಕೋಟಾ ಶ್ರೀನಿವಾಸ ಪೂಜಾರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಸೇರಿದಂತೆ ವಿಧಾನಪರಿಷತ್‍ನ ಮುಖ್ಯ ಸಚೇತಕರು, ವಿರೋಧ ಪಕ್ಷದ ಮುಖ್ಯ ಸಚೇತಕರು, ವಿಧಾನಸಭೆಯ ಮುಖ್ಯ ಸಚೇತಕರು ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ವಹಿಸಲಿದ್ದು, ಲೋಕಸಭೆಯ ಸದಸ್ಯರು, ವಿಧಾನಸಭೆಯ ಸದಸ್ಯರು, ಗಣ್ಯರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ರಜನೀಶ್ ಗೋಯೆಲ್, ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಗೋಯೆಲ್, ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಕರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಾದ ಬಿ.ಬಿ.ಕಾವೇರಿ ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಉಮಾ ಮಹದೇವನ್ ಸೇರಿದಂತೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಯುಕ್ತರು ಹಾಗೂ ಶಿವಮೊಗ್ಗ ಜಿಲ್ಲಾ ಆಯುಕ್ತರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Exit mobile version