ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಜ.11: ಪ್ರತಿ ವರ್ಷದಂತೆ ಈ ವರ್ಷವು ಜನವರಿ 15 ರಂದು ತಹಶೀಲ್ದಾರ ಕಾರ್ಯಾಲಯದಲ್ಲಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತದೆ ಎಂದು ಹುಬ್ಬಳ್ಳಿ ಶಹರ ತಹಸೀಲ್ದಾರರಾದ ಕಲಗೌಡ ಪಾಟೀಲ ಹೇಳಿದರು.
ಇಂದು ತಹಶೀಲ್ದಾರ ಕಾರ್ಯಾಲಯದಲ್ಲಿ ನಡೆದ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಅಂದು ಬೆಳಿಗ್ಗೆ 11 ಗಂಟೆಗೆ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ನೆರವೇರಿಸಲಾಗುವುದು. ಲಕ್ಷ್ಮಣ್ ಬೀಳಗಿ ಅವರು ಉಪನ್ಯಾಸ ನೀಡುವರು ಎಂದರು.
ಸಭೆಯಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರರಾದ ಪ್ರಕಾಶ ನಾಶಿ, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.