ಹುಬ್ಬಳ್ಳಿ ( ಕರ್ನಾಟಕ ವಾರ್ತೆ) ಜ.12 : 2023-24 ನೇ ಸಾಲಿನ 2ನೇ ಸುತ್ತಿನ ಭಂಡಿವಾಡ ಗ್ರಾಮಸಭೆಯನ್ನು ಜನೇವರಿ 19 ರಂದು ಬೆಳಿಗ್ಗೆ 11.30 ಕ್ಕೆ ಗ್ರಾಮದ ಮಾರುತಿ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿವಿಧ ಇಲಾಖೆಗಳಿಂದ ಕೈಗೊಂಡ ಯೋಜನೆಗಳ ಬಗ್ಗೆ ಚರ್ಚೆ, ವಿವಿಧ ಯೋಜನೆಯಡಿ ಫಲಾನುಭವಿಗಳ ಆಯ್ಕೆ, ಸಾರ್ವಜನಿಕ ಕುಂದುಕೊರತೆಗಳ ಬಗ್ಗೆ ಚರ್ಚೆ ಹಾಗೂ ಅಧ್ಯಕ್ಷರ ಅಪ್ಪಣೆ ಮೇರೆಗೆ ಬರುವ ಇತರೆ ವಿಷಯಗಳ ಚರ್ಚೆಗಳನ್ನು ಗ್ರಾಮಸಭೆಯಲ್ಲಿ ಕೈಗೊಳ್ಳಲಾಗುತ್ತದೆ.
ಗ್ರಾಮ ಸಭೆಗೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಮಹಿಳೆಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಬೇಕೆಂದು ಭಂಡಿವಾಡ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಅಶ್ವಿನಿ ರಾಠೋಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.