ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಜ 12: ಪ್ರತಿ ವರ್ಷದಂತೆ ಈ ವರ್ಷವು ಜನೆವರಿ 19 ರಂದು ತಹಶೀಲ್ದಾರ್ ಕಾರ್ಯಾಲಯದಲ್ಲಿ ಮಹಾಯೋಗಿ ಶ್ರೀ ವೇಮನ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತದೆ ಎಂದು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಪ್ರಕಾಶ ನಾಶಿ ಹೇಳಿದರು.
ಇಂದು ತಹಶೀಲ್ದಾರ್ ಕಾರ್ಯಾಲಯದಲ್ಲಿ ನಡೆದ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಅಂದು ಬೆಳಿಗ್ಗೆ 10.30 ಗಂಟೆಗೆ ಮಹಾಯೋಗಿ ಶ್ರೀ ವೇಮನ ಜಯಂತಿಯನ್ನು ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ನೆರವೇರಿಸಲಾಗುವುದು. ನುರಿತ ಉಪನ್ಯಾಸಕರಿಂದ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು.
ಸಭೆಯಲ್ಲಿ ಹುಬ್ಬಳ್ಳಿ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರ ಹೊಸಮನಿ, ಅವರು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಅವರು ಉಪಸ್ಥಿತರಿದ್ದರು.