ಹುಬ್ಬಳ್ಳಿ(ಕರ್ನಾಟಕ ವಾರ್ತೆ ) ಜ.24: 2019-20ನೇ ಸಾಲಿನ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ಶೇಕಡಾ 40ರ ವ್ಯಕ್ತಿ ಸಂಬಂಧಿತ ಕಾರ್ಯಕ್ರಮಗಳಲ್ಲಿ ಶೇ. 17.15 ಪರಿಶಿಷ್ಟ ಜಾತಿ ಕಲ್ಯಾಣ ಕಾರ್ಯಕ್ರಮ ಹಾಗೂ ಶೇ. 6.95 ಪರಿಶಿಷ್ಟ ಪಂಗಡ ಕಲ್ಯಾಣ ಕಾರ್ಯಕ್ರಮಗಳಲ್ಲಿ ಎಂ.ಬಿ.ಬಿ.ಎಸ್ ಹಾಗೂ ಬಿ.ಇ (ಎಂಜನಿಯರಿಂಗ್) ವ್ಯಾಸಂಗ ಮಾಡುತ್ತಿರುವ ಬಿ.ಪಿ.ಎಲ್. ಕಾರ್ಡ ಹೊಂದಿರುವ ಪ.ಜಾತಿ, ಪ.ಪಂಗಡದ ಪ್ರತಿಭಾನಿತ್ವ ವಿದ್ಯಾರ್ಥಿಗಳಿಗೆ ಲ್ಯಾಪಟಾಪಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ನಗರದಲ್ಲಿ ವಾಸಿಸುವ ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ತಾವು ವಾಸಿಸುವ ಪ್ರದೇಶದ ವಲಯ ಕಚೇರಿಯಲ್ಲಿ ಉಚಿತವಾಗಿ ಕರಪತ್ರ ಹಾಗೂ ಅರ್ಜಿಗಳನ್ನು ಪಡೆದು ನಿಗದಿಪಡಿಸಿದ ದಾಖಲೆಗಳನ್ನು ಲಗತ್ತಿಸಿ, ದ್ವಿ ಪ್ರತಿಯಲ್ಲಿ ಫೆಬ್ರುವರಿ 12ರ ಸಂಜೆ 5 ಗಂಟೆಯೊಳಗಾಗಿ ಸಂಬಂಧಪಟ್ಟ ವಲಯ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಸರಕಾರದ ನಿರ್ದೇಶನದಂತೆ ಅಪೂರ್ಣ ಅರ್ಜಿಗಳನ್ನು ದಾಖಲೆ ಇಲ್ಲದೆ ಇರುವ ಅರ್ಜಿಗಳನ್ನು ಮತ್ತು ತಡವಾಗಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸುವದಿಲ್ಲ. ಹೆಚ್ಚಿನ ಮಾಹಿತಿಗೆ ಪಾಲಿಕೆಯ ವಲಯ ಕಚೇರಿಗಳಲ್ಲಿ ಸಂಪರ್ಕಿಸುವಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.