ಹುಬ್ಬಳ್ಳಿ ( ಕರ್ನಾಟಕ ವಾರ್ತೆ) ಜ.24: ಭಾರತ ಚುನಾವಣಾ ಆಯೋಗ, ತಾಲೂಕು ಕಾನೂನು ಸೇವಾ ಸಮಿತಿ ಹುಬ್ಬಳ್ಳಿ ಮತ್ತು ಬಿ.ವಿ.ಬಿ.ತಾಂತ್ರಿಕ ಮಹಾವಿದ್ಯಾಲಯ ಹುಬ್ಬಳ್ಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಜನವರಿ 25ರಂದು ಬೆಳಿಗ್ಗೆ 9.30 ಗಂಟೆಗೆ ಬಿ.ವಿ.ಬಿ ತಾಂತ್ರಿಕ ಮಹಾವಿದ್ಯಾಲಯದ ಬಿ.ಟೆಕ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಒಂದನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶರಾದ ರವೀಂದ್ರ.ಡಿ.ಆರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಬಿ.ವಿ.ಬಿ. ತಾಂತ್ರಿಕ ಮಹಾವಿದ್ಯಾಲಯದ ಕುಲಪತಿಗಳಾದ ಡಾ.ಅಶೋಕ್.ಎಸ್.ಶೆಟ್ಟರ್ ಅಧ್ಯಕ್ಷತೆ ವಹಿಸುವರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ, ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಧಾನ ದಿವಾಣಿ ನ್ಯಾಯಾಧೀಶರಾದ ರಾಜಶೇಖರ್ ತಿಳಗಂಜಿ, ಡಿಸಿಪಿಗಳಾದ ರಾಜೀವ್ ಎಂ, ಹುಬ್ಬಳ್ಳಿ ನಗರ ತಹಶೀಲ್ದಾರರಾದ ಕಲಗೌಡ್ ಪಾಟೀಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.