Site icon MOODANA Web Edition

ಜ.26 ರಂದು 75ನೇ ಗಣರಾಜ್ಯೋತ್ಸವ ದಿನಾಚರಣೆ

ಹುಬ್ಬಳ್ಳಿ ( ಕರ್ನಾಟಕ ವಾರ್ತೆ) ಜ.24: ಹುಬ್ಬಳ್ಳಿ ನಗರ ತಾಲೂಕು ಗಣರಾಜ್ಯೋತ್ಸವ ಸಮಿತಿ ವತಿಯಿಂದ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜನೇವರಿ 26 ರಂದು ಬೆಳಿಗ್ಗೆ 9 ಗಂಟೆಗೆ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ ಅವರು ಧ್ವಜಾರೋಹಣವನ್ನು ನೆರವೇರಿಸುವರು. ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ, ವಿಧಾನ ಪರಿಷತ ಸಭಾಪತಿಯಾದ ಬಸವರಾಜ ಹೊರಟ್ಟಿ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದೆ.

ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಮತ್ತು ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಅವರು ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳುವರು.

ಶಾಸಕ ಮಹೇಶ ಟೆಂಗಿನಕಾಯಿ ಅಧ್ಯಕ್ಷತೆ ವಹಿಸುವರು. ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು. ವಿವಿಧ ಪಡೆಗಳು ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version