ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಜ.24: 2023-24ನೇ ಸಾಲಿನ ದೇವರಗುಡಿಹಾಳ ಗ್ರಾಮಸಭೆಯನ್ನು ಜನೆವರಿ 29 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.
ವಿವಿಧ ಇಲಾಖೆಗಳಿಂದ ಕೈಗೊಂಡ ಯೋಜನೆಗಳ ಬಗ್ಗೆ ಇಲಾಖಾವಾರು ಚರ್ಚೆ, ವಿವಿಧ ಯೋಜನೆಯಡಿ ಫಲಾನುಭವಿಗಳ ಆಯ್ಕೆ, ಸಾರ್ವಜನಿಕರ ಕುಂದುಕೊರತೆ, ನಮ್ಮ ಗ್ರಾಮ ನಮ್ಮ ಯೋಜನೆ ಬಗ್ಗೆ ಚರ್ಚೆ ಹಾಗೂ ಅಧ್ಯಕ್ಷರ ಅಪ್ಪಣೆ ಮೇರೆಗೆ ಬರುವ ಇತರೆ ವಿಷಯಗಳ ಚರ್ಚೆಗಳನ್ನು ಗ್ರಾಮಸಭೆಯಲ್ಲಿ ಕೈಗೊಳ್ಳಲಾಗುತ್ತದೆ.
ಗ್ರಾಮ ಸಭೆಗೆ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ರೇವಡಿಹಾಳ, ಪರಸಾಪೂರ ಗ್ರಾಮಗಳ ಸಾರ್ವಜನಿಕರು ಭಾಗವಹಿಸಬೇಕೆಂದು ದೇವರಗುಡಿಹಾಳ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.