ಬೆಂಗಳೂರು, ಜನವರಿ 24 (ಕರ್ನಾಟಕ ವಾರ್ತೆ) :
ಭಾರತದ ಚುನಾವಣಾ ಆಯೋಗದ ಜನವರಿ 16ರ ಪತ್ರಿಕಾ ಪ್ರಕಟಣೆ ಮತ್ತು ಜನವರಿ 23ರ ಅಧಿಸೂಚನೆಯ ರೀತ್ಯಾ ಕರ್ನಾಟಕ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ನಡೆಯಲಿರುವ ಉಪ ಚುನಾವಣೆ – 2024ರ ಚುನಾವಣಾ ತಿಳುವಳಿಕೆ ಪತ್ರವನ್ನು ಚುನಾವಣಾಧಿಕಾರಿಗಳು, ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಪ್ರಾದೇಶಕ ಆಯುಕ್ತರು ಹೊರಡಿಸಿರುತ್ತಾರೆ.
ಚುನಾವಣೆಯ ತಿಳಿವಳಿಕೆ ಪತ್ರ :
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಒಬ್ಬ ಸದಸ್ಯನನ್ನು ಚುನಾಯಿಸಲು ಚುನಾವಣೆ ನಡೆಸಬೇಕಾಗಿದೆ.
ನಾಮಪತ್ರಗಳನ್ನು ಉಮೇದುವಾರರು ಅಥವಾ ಅವರ ಸೂಚಕರು ಚುನಾವಣಾಧಿಕಾರಿಗೆ ಅಥವಾ ಸಹಾಯಕ ಚುನಾವಣಾಧಿಕಾರಿಯಾದ ಡಾ: ಕೆ. ಹರೀಶ್ ಕುಮಾರ್, ವಿಶೇಷ ಆಯುಕ್ತರು (ಆಡಳಿತ), ಬಿ.ಬಿ.ಎಂ.ಪಿ., ಬೆಂಗಳೂರು ರವರಿಗೆ ಪ್ರಾದೇಶಿಕ ಆಯುಕ್ತರ ಕಛೇರಿ, ಬೆಂಗಳೂರು ವಿಭಾಗ, 2ನೇ ಮಹಡಿ, ಬಿ.ಎಂ.ಟಿ.ಸಿ. ಕಟ್ಟಡ, ಕೆ.ಹೆಚ್.ರಸ್ತೆ, ಶಾಂತಿನಗರ, ಬೆಂಗಳೂರು- 560027 (ಸ್ಥಳದಲ್ಲಿ) ಯಾವುದೇ ದಿನದಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 3.00 ಗಂಟೆಯ ನಡುವೆ ದಿನಾಂಕ: 30-01-2024 (ಮಂಗಳವಾರ) ದಿನಾಂಕಕ್ಕೆ ಮೀರದಂತೆ (ಸರ್ಕಾರಿ ರಜಾ ದಿನದ ಹೊರತು) ಸಲ್ಲಿಸಬಹುದು.
ನಾಮಪತ್ರದ ನಮೂನೆಗಳನ್ನು ವಿಶೇಷ ಆಯುಕ್ತರು (ಆಡಳಿತ), ಬಿ.ಬಿ.ಎಂ.ಪಿ., ಬೆಂಗಳೂರು ರವರಿಗೆ ಪ್ರಾದೇಶಿಕ ಆಯುಕ್ತರ ಕಛೇರಿ, ಬೆಂಗಳೂರು ವಿಭಾಗ, 2ನೇ ಮಹಡಿ, ಬಿ.ಎಂ.ಟಿ.ಸಿ. ಕಟ್ಟಡ, ಕೆ.ಹೆಚ್.ರಸ್ತೆ, ಶಾಂತಿನಗರ, ಬೆಂಗಳೂರು- 560027 ಇಲ್ಲಿ ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 3.00 ಗಂಟೆಯ ಒಳಗೆ ಪಡೆದುಕೊಳ್ಳಬಹುದು.
ನಾಮಪತ್ರಗಳನ್ನು ಪ್ರಾದೇಶಿಕ ಆಯುಕ್ತರ ಕಛೇರಿ, ಬೆಂಗಳೂರು ವಿಭಾಗ, 2ನೇ ಮಹಡಿ, ಬಿ.ಎಂ.ಟಿ.ಸಿ. ಕಟ್ಟಡ, ಕೆ.ಹೆಚ್.ರಸ್ತೆ, ಶಾಂತಿನಗರ, ಬೆಂಗಳೂರು-560027 (ಸ್ಥಳದಲ್ಲಿ) 31-01-2024 (ಬುಧವಾರ) ದಿನಾಂಕದಂದು ಬೆಳಿಗ್ಗೆ 11.00 ಗಂಟೆಗೆ ಪರಿಶೀಲನೆಗೆ ತೆಗೆದುಕೊಳ್ಳಬಹುದು.
ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ತಿಳಿವಳಿಕೆ ಪತ್ರವನ್ನು ಉಮೇದುವಾರನು ಅಥವಾ ಅವರ ಯಾರೇ ಸೂಚಕರು ಅಥವಾ ಅದನ್ನು ಸಲ್ಲಿಸಲು ಉಮೇದುವಾರನಿಂದ ಲಿಖಿತದಲ್ಲಿ ಅಧಿಕೃತನಾದ ಆತನ ಚುನಾವಣಾ ಏಜೆಂಟನು ಚುನಾವಣಾಧಿಕಾರಿಗೆ ಅಥವಾ ಸಹಾಯಕ ಚುನಾವಣಾಧಿಕಾರಿಯಾದ ಡಾ: ಕೆ.ಹರೀಶ್ ಕುಮಾರ್, ವಿಶೇಷ ಆಯುಕ್ತರು (ಆಡಳಿತ), ಬಿ.ಬಿ.ಎಂ.ಪಿ., ಬೆಂಗಳೂರು ರವರಿಗೆ ಪ್ರಾದೇಶಿಕ ಆಯುಕ್ತರ ಕಛೇರಿ, ಬೆಂಗಳೂರು ವಿಭಾಗ, 2ನೇ ಮಹಡಿ, ಬಿ.ಎಂ.ಟಿ.ಸಿ. ಕಟ್ಟಡ, ಕೆ.ಹೆಚ್.ರಸ್ತೆ, ಶಾಂತಿನಗರ, ಬೆಂಗಳೂರು- 560027 ಇಬ್ಬರಲ್ಲೊಬ್ಬ ಅಧಿಕಾರಿಗೆ ಅವರ ಕಛೇರಿಯಲ್ಲಿ 02-02-2024(ಶುಕ್ರವಾರ) ದಿನಾಂಕದಂದು ಮಧ್ಯಾಹ್ನ 3.00 ಗಂಟೆಗೆ ಮುಂಚೆ ಸಲ್ಲಿಸಬಹುದು.
ಚುನಾವಣೆಗೆ ಸ್ಪರ್ಧೆ ನಡೆದ ಸಂದರ್ಭದಲ್ಲಿ 16-02-2024 (ಶುಕ್ರವಾರ) ದಿನಾಂಕದಂದು ಬೆಳಿಗ್ಗೆ 8.00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ಮತದಾನ ನಡೆಯುವುದೆಂದು ಅಮ್ಲಾನ್ ಆದಿತ್ಯ ಬಿಸ್ವಾಸ್, ಚುನಾವಣಾಧಿಕಾರಿಗಳು, ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.