Site icon MOODANA Web Edition

ರಾಷ್ಟ್ರೀಯ ಮತದಾರರ ದಿನಾಚರಣೆ

ಹುಬ್ಬಳ್ಳಿ ( ಕರ್ನಾಟಕ ವಾರ್ತೆ) ಜ.25 ಇಂದು ತಾಲೂಕ ಪಂಚಾಯತ ಸಭಾಭವನದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಡಾ.ಸಂಗಮೇಶ ಬಂಗಾರಿಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂವಿಧಾನ ಮಹತ್ವವಾದುದು ಅದನ್ನು ಎಲ್ಲರೂ ಗೌರವಿಸಬೇಕು. ಮತ ಚಲಾಯಿಸುವುದರಿಂದ ನಮ್ಮ ನಾಯಕರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವಿದೆ. ಈ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ತಾಲೂಕು ಪಂಚಾಯತ ಐ.ಇ.ಸಿ ಸಂಯೋಜಕರಾದ ರಮೇಶ ಲಮಾಣಿ ಅವರು ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ತಾಲೂಕ ಪಂಚಾಯತ ವ್ಯವಸ್ಥಾಪಕರಾದ ಶಿವಾನಂದ ನಸಬಿ, ಹಿಂದುಳಿದ ವರ್ಗಗಳ ಇಲಾಖೆಯ ತಾಲೂಕಾ ವಿಸ್ತಣಾಧಿಕಾರಿಗಳಾದ ಸುರೇಶ ಗುರಣ್ಣವರ ಹಾಗೂ ತಾಲೂಕ ಪಂಚಾಯತ ಸಿಬ್ಬಂದಿ, ಹಿಂದುಳಿದ ವರ್ಗಗಳ ಇಲಾಖೆಯ ಸಿಬ್ಬಂದಿ, ಅಕ್ಷರ ದಾಸೋಹ ಸಿಬ್ಬಂದಿ ಇತರರು ಉಪಸ್ಥಿತರಿದ್ದರು.

Exit mobile version