ಹುಬ್ಬಳ್ಳಿ ( ಕರ್ನಾಟಕ ವಾರ್ತೆ) ಜ.26: ಇಂದು ಇಂದಿರಾ ಗಾಜಿನ ಮನೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಮೀನುಗಾರಿಕೆ ಇಲಾಖೆ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಹಾಪ್ ಕಾಮ್ಸ್ ಮತ್ತು ಉದ್ಯಾನ ಹಾಗೂ ಫಲಪುಷ್ಪ ಪ್ರದರ್ಶನ ಸಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಧಾರವಾಡ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಹಾಗೂ ಸಿರಿಧಾನ್ಯ ಹಬ್ಬ 2023-24 ನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಮಹೇಶ ಟೆಂಗಿನಕಾಯಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.