ಹುಬ್ಬಳ್ಳಿ( ಕರ್ನಾಟಕ ವಾರ್ತೆ)ಜ.26 : ಇಂದು ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯತ ವತಿಯಿಂದ ಆಯೋಜಿಸಿದ್ದ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಮಚಂದ್ರ ಹೊಸಮನಿ ಅವರು ನೆರವೇರಿಸಿದರು.
ತಾಲೂಕ ಪಂಚಾಯತ ವ್ಯವಸ್ಥಾಪಕರಾದ ಶಿವಾನಂದ ನಸಬಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಡಾ.ಸಂಗಮೇಶ ಬಂಗಾರಿಮಠ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಿ.ವಿ.ಕರವೀರಮಠ, ಹಿಂದುಳಿದ ವರ್ಗಗಳ ಇಲಾಖೆಯ ತಾಲೂಕಾ ವಿಸ್ತಣಾಧಿಕಾರಿಗಳಾದ ಸುರೇಶ ಗುರಣ್ಣವರ, ಎಂಆರಡಬ್ಲೂ ಮಹಾಂತೇಶ ಕುರ್ತಕೋಟಿ ಹಾಗೂ ತಾಲೂಕ ಪಂಚಾಯತ ಸಿಬ್ಬಂದಿ, ಹಿಂದುಳಿದ ವರ್ಗಗಳ ಇಲಾಖೆಯ ಸಿಬ್ಬಂದಿ, ಅಕ್ಷರ ದಾಸೋಹ ಸಿಬ್ಬಂದಿ ಇತರರು ಉಪಸ್ಥಿತರಿದ್ದರು.