17.6 C
Karnataka
Thursday, February 6, 2025
spot_img

ದೇಶದ ಪ್ರಗತಿಗೆ ಪ್ರತಿಯೊಬ್ಬರು ಕೊಡುಗೆ ನೀಡಲಿ -ಕಲಗೌಡ ಪಾಟೀಲ್

ಹುಬ್ಬಳ್ಳಿ(ಕರ್ನಾಟಕ ವಾರ್ತೆ) ಜ.26: ಭಾರತವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಒಂದಾಗಿದೆ. ಆರ್ಥಿಕವಾಗಿ, ಸಾಮಾಜಿಕವಾಗಿ , ಶೈಕ್ಷಣಕವಾಗಿ ಪ್ರಗತಿ ಸಾಧಿಸುತ್ತಿದೆ. ದೇಶದ ಪ್ರಗತಿಗೆ ಪ್ರತಿಯೊಬ್ಬರು ಕೊಡುಗೆ ನೀಡಬೇಕು ಎಂದು ಹುಬ್ಬಳ್ಳಿ ನಗರ ತಹಶೀಲ್ದಾರರಾದ ಕಲಗೌಡ ಪಾಟೀಲ ಹೇಳಿದರು.
ಇಂದು ನೆಹರು ಮೈದಾನದಲ್ಲಿ ನಡೆದ 75ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ, ಗಾಂಧೀಜಿ ಮತ್ತು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತ ಪ್ರಜಾಪ್ರಭುತ್ವ ರಾಷ್ಟ್ರ. ಭಾರತವು ಒಂದು ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ, ಪ್ರಜಾಸತ್ತಾತ್ಮಕ, ಗಣತಂತ್ರವಾಗಿದೆ. 1947 ಆಗಸ್ಟ್ 15 ರಂದು ಭಾರತ ಸ್ವತಂತ್ರವಾಯಿತು. 1950ರ ಜನವರಿ26 ರಂದು ಗಣರಾಜ್ಯವಾಯಿತು. ಹಾಗಾಗಿ ಪ್ರತಿ ವರ್ಷ ಜನವರಿ 26 ರಂದು ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಎಲ್ಲ ಪ್ರಜೆಗಳಿಗೆ ಸಾಮಾಜಿಕ, ರಾಜಕೀಯ, ಮೂಲಭೂತ ಹಕ್ಕುಗಳು ನ್ಯಾಯವನ್ನು ಮತ್ತು ಸ್ವಾತಂತ್ರ್ಯವನ್ನು ಹೊಂದಿರುವ ಹಕ್ಕಿದೆ. ಭಾರತ ಸಂವಿಧಾನವು ನ್ಯಾಯಾಂಗ, ಶಾಸಕಾಂಗ, ಕಾಯಾರ್ಂಗ ಎಂಬ ಅಂಶಗಳನ್ನು ಒಳಗೊಂಡಿದೆ.
ಸರ್ಕಾರವು ಜನರಿಗೆ ಸಹಾಯ ಮಾಡುವ ಉದ್ದೇಶದಿಂದ ಮತ್ತು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡುವ ಉದ್ದೇಶದಿಂದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಿಂದ ಜನರಿಗೆ ಸಹಾಯವಾಗಿದೆ. ಬೆಳೆ ಹಾನಿಯಾದ ರೈತರಿಗೆ ಸರ್ಕಾರ ವಿವಿಧ ಯೋಜನೆಗಳನ್ನು ಅನುμÁ್ಠನಕ್ಕೆ ತಂದಿದೆ. ರೈತರ ಖಾತೆಗೆ ನೇರವಾಗಿ ಹಣವನ್ನು ಜಮಾ ಮಾಡಲಾಗಿದೆ. ರೈತ ಮಕ್ಕಳಿಗೆ ಉಚಿತ ಶಿಕ್ಷಣ, ಹಾಸ್ಟೆಲ್ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಶಾಸಕರಾದ ಮಹೇಶ್ ತೆಂಗಿನಕಾಯಿ ಅವರು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಪ್ರತಿಯೊಂದು ಕುಟುಂಬವನ್ನು ಹಸಿವು ಮುಕ್ತವಾಗಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳ ಅಡಿಯಲ್ಲಿ ಲಕ್ಷಾಂತರ ಕುಟುಂಬಕ್ಕೆ ಆಹಾರ ಭದ್ರತೆಯನ್ನು ಒದಗಿಸಿದ್ದಾರೆ. 80 ಕೋಟಿ ಜನರಿಗೆ 10 ಕೆ.ಜಿ.ಅಕ್ಕಿ ವಿತರಣೆ, 54 ಲಕ್ಷ ಬೀದಿ ಬದಿ ವ್ಯಾಪಾರಿಗಳಿಗೆ ಸಾಲದ ನೆರವು, ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ 13 ಸಾವಿರ ಕೋಟಿ ಹಣವನ್ನು ಜನರಿಗೆ ನೀಡಲಾಗಿದೆ. 80 ಕೋಟಿ ಭಾರತೀಯರಿಗೆ ಆಹಾರ ಭದ್ರತೆಯನ್ನು ಒದಗಿಸಲಾಗಿದೆ. ಬಿ.ಪಿ.ಎಲ್ ಕಾರ್ಡುದಾರರಿಗೆ ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ವಿತರಣೆ ಮಾಡಲಾಗಿದೆ. 50 ಕೋಟಿ ಜನಧನ್ ಖಾತೆಯನ್ನು ಮಹಿಳೆಯರಿಗೆ ತೆರೆಯಲಾಗಿದೆ. ದೇಶ ಪ್ರಗತಿಯತ್ತ ಸಾಗಲು ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.
ವಿವಿಧ ದಳಗಳು ಆಕರ್ಷಕ ಪಥ ಸಂಚಲನ ನಡೆಸಿದವು. ವಿವಿಧ ಶಾಲಾ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ ಗಮನ ಸೆಳೆದವು.
ಕಾಯ್ರ್ರಮದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಶಿ, ಹುಬ್ಬಳ್ಳಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರ ಹೊಸಮನಿ, ಪ್ರೋಬೇಷನರಿ ತಹಶೀಲ್ದಾರ ದೀಪಾ, ಅಕ್ಷತಾ, ಹುಬ್ಬಳ್ಳಿ ದಕ್ಷಿಣ ವಿಭಾಗದ ಎ.ಸಿ.ಪಿ. ವಿಜಯಕುಮಾರ್. ಟಿ, ಉತ್ತರ ವಿಭಾಗದ ಎ.ಸಿ.ಪಿ. ಬಿಲ್ಲಪ್ಪ, ತಹಶೀಲ್ದಾರ ಪಟೇಲ್, ಪೋಲೀಸ್ ಇನ್ಸ್‍ಪೆಕ್ಟರ್ ಎಂ.ಎಂ.ತಹಶೀಲ್ದಾರ, ಪೋಲೀಸ್ ಇಲಾಖೆ, ಗೃಹ ರಕ್ಷಕ ದಳ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Related Articles

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!