Site icon MOODANA Web Edition

ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಜನವರಿ 30 (ಕರ್ನಾಟಕ ವಾರ್ತೆ):
ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರಿನ ವಿಸ್ತರಣಾ ನಿರ್ದೇಶನಾಲಯವು ಸಮೇತಿ(ದಕ್ಷಿಣ), ಸಿಬ್ಬಂದಿ ತರಬೇತಿ ಘಟಕ, ವಿಸ್ತರಣಾ ನಿರ್ದೇಶನಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ಒಂದು ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದೆ.

ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದೃಢೀಕರಿಸಿದ ಪ್ರಮಾಣಪತ್ರಗಳೊಂದಿಗೆ ಫೆಬ್ರವರಿ 13ರೊಳಗಾಗಿ ಸಂಯೋಜಕರು, ಸಮೇತಿ (ದಕ್ಷಿಣ), ಸಿಬ್ಬಂದಿ ತರಬೇತಿ ಘಟಕ, ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು-560065 ಈ ಕಛೇರಿಗೆ ಸಲ್ಲಿಸುವುದು. ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರುವವರು ಅರ್ಜಿಯನ್ನು ಸಲ್ಲಿಸಬಹುದು. ಮಾಸಿಕ ಕ್ರೋಢಿಕೃತ ವೇತನ ರೂ.16,000/- ನೀಡಲಾಗುವುದು.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 9972035456ಗೆ ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Exit mobile version