29.7 C
Karnataka
Thursday, March 19, 2026
spot_img

ಫೆ.2 ರಿಂದ 4ರವರೆಗೆ 12ನೇ ಒಣಮೆಣಸಿನಕಾಯಿ ಮೇಳ ಆಯೋಜನೆ-ವ್ಯವಸ್ಥಾಪಕ ನಿರ್ದೇಶಕರಾದ ಬಿ.ಆರ್.ಗಿರೀಶ

ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಜ.31: ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ದಿ ಮಂಡಳಿ, ತೋಟಗಾರಿಕೆ ಇಲಾಖೆ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹುಬ್ಬಳ್ಳಿ, ಅಮರ ಶಿವ ರೈತ ಉತ್ಪಾದಕ ಸಂಸ್ಥೆ ಸಂಶಿ ಹಾಗೂ ಉಳುವಾಯೋಗಿ ರೈತ ಉತ್ಪಾದಕ ಸಂಸ್ಥೆ ಹುಬ್ಬಳ್ಳಿ ಇವುಗಳ ಸಂಯುಕ್ತಾಶ್ರಯದಲ್ಲಿ 12 ನೇ ಒಣ ಮೆಣಸಿನಕಾಯಿ ಮೇಳ 2023-24 ನ್ನು ಫೆಬ್ರವರಿ 2 ರಿಂದ 4 ರವರೆಗೆ ಹುಬ್ಬಳ್ಳಿಯ ಮೂರುಸಾವಿರ ಮಠದ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ದಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಆರ್.ಗಿರೀಶ ಹೇಳಿದರು.

ಇಂದು ವಿದ್ಯಾನಗರದ ನೇಕಾರ ಭವನದಲ್ಲಿ ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ದಿ ಮಂಡಳಿಯ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಫೆಬ್ರವರಿ 2ರಂದು ಬೆಳಿಗ್ಗೆ 11 ಗಂಟೆಗೆ ಮೇಳವನ್ನು ಕಾರ್ಮಿಕ ಮತ್ತು ಜಿಲ್ಲಾ ಉಸ್ಥುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಉದ್ಘಾಟಿಸುವರು. ಮೂರುಸಾವಿರಮಠ ಮಹಾಸಂಸ್ಥಾನದ ಜಗದ್ಗುರುಗಳಾದ ಡಾ. ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸುವವರು. ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದೆ. ತೋಟಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಗೂ ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ದಿ ಮಂಡಳಿಯ ಅದ್ಯಕ್ಷರಾದ ಎಸ್.ಎಸ್. ಮಲ್ಲಿಕಾರ್ಜುನ ಅವರು ಮಳಿಗೆಗಳನ್ನು ಉದ್ಘಾಟಿಸುವರು ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ವಿನಯ ಕುಲಕರ್ಣಿ, ವಾಯುವ್ಯ ಸಾರಿಗೆ ನಿಗಮ ನಿಯಮಿತದ ಅಧ್ಯಕ್ಷರಾದ ಭರಮಗೌಡ (ರಾಜು) ಅಲಗೌಡ ಕಾಗೆ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಜೆ.ಎಂ.ಗಣೇಶ್ ಅವರು ವಿಶೇಷ ಅತಿಥಿಗಳಾಗಿ ಆಗಮಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಅಬ್ಬಯ್ಯ ಪ್ರಸಾದ ಅವರು ವಹಿಸುವವರು ಎಂದರು.

ಒಣ ಮೆಣಸಿನಕಾಯಿಯ ನೇರ ಮಾರಾಟ ಪ್ರೋತ್ಸಾಹ, ಒಣಮೆಣಸಿನಕಾಯಿ ಬೆಳೆಗಾರರ ಮತ್ತು ಗ್ರಾಹಕರ ಸಂಪರ್ಕ ಕಲ್ಪಿಸುವಿಕೆ, ಇತ್ತೀಚಿನ ಸಂಶೋಧನಾ ಮಾಹಿತಿಯನ್ನು ಬೆಳೆಗಾರರಿಗೆ ಒದಗಿಸುವುದು ಮೇಳದ ಉದ್ದೇಶವಾಗಿದೆ. ಕಳೆದ ಬಾರಿ 100 ರೈತರು ಮೇಳದಲ್ಲಿ ಭಾಗವಹಿಸಿದ್ದರು. ಅಲ್ಲದೇ ರೂ.1.10 ಕೋಟಿ ವೆಚ್ಚದ 246 ಕ್ವಿಂಟಲ್ ಒಣ ಮೆಣಸಿನಕಾಯಿ ಮಾರಾಟವಾಗಿತ್ತು. ಆಸಕ್ತ ರೈತರು ನೋಂದಣಿಯನ್ನು ಮುಂಚಿತವಾಗಿ ತಾಲೂಕು ತೋಟಗಾರಿಕೆ ಕಛೇರಿ ಅಥವಾ ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯಲ್ಲಿ ಪಹಣಿ ಪತ್ರಿಕೆ ಮತ್ತು ಆಧಾರ ಕಾರ್ಡ್‍ನೊಂದಿಗೆ ಮಾಡಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.
ಸಿದ್ಧರಾಮಯ್ಯ ಮು. ಬರಗಿಮಠ ಪತ್ರಿಕಾಗೋಷ್ಠಿಯಲ್ಲಿದ್ದರು.

spot_img
spot_img
spot_img
spot_img
spot_img
spot_img

Related Articles

- Advertisement -spot_img

Latest Articles

error: Content is protected !!