Site icon MOODANA Web Edition

ಅಗ್ನಿವೀರ ವಾಯು ಆಯ್ಕೆ ಪರೀಕ್ಷೆ; ಆನ್‍ಲೈನ್ ಅರ್ಜಿ ಅಹ್ವಾನ

ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಜ.31: ಭಾರತೀಯ ವಾಯುಪಡೆಯ ಅಗ್ನಿಪಥ ಯೋಜನೆಯಡಿಯಲ್ಲಿ ಅಗ್ನಿವೀರ ವಾಯು ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪಿಯುಸಿ, 10+2 ತತ್ಸಮಾನ ಪರೀಕ್ಷೆಯಲ್ಲಿ ಶೇ.50 ಅಂಕಗಳೊಂದಿಗೆ ಅಥವಾ ಡಿಪ್ಲೋಮಾ ಕನಿಷ್ಠ ಶೇ.50 ಅಂಕಗಳೊಂದಿಗೆ ಹಾಗೂ ಇಂಗ್ಲೀಷ್ ವಿಷಯದಲ್ಲಿ ಕನಿಷ್ಠ ಶೇ.50 ತೇರ್ಗಡೆಯಾಗಿರಬೇಕು. ವಯೋಮಿತಿ 2 ಜನೇವರಿ-2004 ರಿಂದ 2 ಜುಲೈ- 2007ರ ನಡುವೆ ಜನಿಸಿರುವ ಅಭ್ಯರ್ಥಿಗಳು ಫೆಬ್ರುವರಿ 6ರೊಳಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ https://careerindianairforce.cdac.in ಮತ್ತು ಆನ್‍ಲೈನ್ ನೋಂದಣಿಗಾಗಿ https://agnipathvayu.cdac.in ವೆಬ್‍ಸೈಟ್‍ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

Exit mobile version