Site icon MOODANA Web Edition

ಪರೀಕ್ಷೆ ಹಾಗೂ ಮೌಲ್ಯಮಾಪನ ಪ್ರಕ್ರಿಯೆ ಕುರಿತು ಒಂದು ದಿನದ ಕಾರ್ಯಾಗಾರ

ಬೆಂಗಳೂರು, ಫೆಬ್ರವರಿ 02 (ಕರ್ನಾಟಕ ವಾರ್ತೆ):

ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ವಿಶ್ವವಿದ್ಯಾಲಯ ಕಾಲೇಜು ಅಧ್ಯಾಪಕರ ಸಂಘದ ಸಂಯುಕ್ತಾಶ್ರಯದಲ್ಲಿ ಪರೀಕ್ಷೆ ಹಾಗೂ ಮೌಲ್ಯಮಾಪನ ಪ್ರಕ್ರಿಯೆ ವಿಷಯ ಕುರಿತು ಫೆಬ್ರವರಿ 3 ರಂದು ಒಂದು ದಿನದ ಕಾರ್ಯಾಗಾರವನ್ನು ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದ ಡಾ.ಎಚ್.ಎನ್.ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‍ನ ಉಪಾಧ್ಯಕ್ಷರಾದ ಪ್ರೊ.ಎಸ್.ಆರ್. ನಿರಂಜನ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದು, ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿಯ ಕುಲಪತಿಗಳಾದ ಡಾ.ಎಸ್.ಎಂ.ಜಯಕರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಲಿಂಗರಾಜ ಗಾಂಧಿ, ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿಯ ಕುಲಸಚಿವರಾದ ಶೇಕ್ ಲತೀಫ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷರಾದ ಡಾ.ತಮ್ಮಯ್ಯ ಆರ್.ಬಿ. ಅವರ ಉಪಸ್ಥಿತಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿಯ ಮೌಲ್ಯಮಾಪನ ಕುಲಸಚಿವರಾದ ಪ್ರೊ. ಶ್ರೀನಿವಾಸ್ .ಸಿ ಅವರು ಪರೀಕ್ಷೆ ಹಾಗೂ ಮೌಲ್ಯಮಾಪನ ಪ್ರಕ್ರಿಯೆ ವಿಷಯ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.

ವಿಚಾರ ಮಂಡನೆ ನಂತರ ಮಧ್ಯಾಹ್ನ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Exit mobile version