Site icon MOODANA Web Edition

ಗ್ಯಾರಂಟಿ ಸಮಾವೇಶಕ್ಕೆ ಭರದ ಸಿದ್ಧತೆ; ಸುಮಾರು 15 ಸಾವಿರಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ

ಹುಬ್ಬಳ್ಳಿ ( ಕರ್ನಾಟಕ ವಾರ್ತೆ) ಫೆ.3: ಇಂದು ಸಂಜೆ 5 ಗಂಟೆಗೆ ರೈಲ್ವೆ ಮೈದಾನದಲ್ಲಿ ಜಿಲ್ಲಾಡಳಿತ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ 72- ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ಮತ್ತು 73- ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರಗಳ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.
ಈ ಸಮಾವೇಶದಲ್ಲಿ ಸುಮಾರು 15 ಸಾವಿರಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಈಗಾಗಲೇ ಕಾರ್ಯಕ್ರಮದ ಮುಖ್ಯ ವೇದಿಕೆ, ಫಲಾನುಭವಿಗಳಿಗೆ ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ವಾಹನಗಳ ಪಾಕಿರ್ಂಗ್, ವೈದ್ಯಕೀಯ ಸೌಲಭ್ಯ ಸೇರಿದಂತೆ ವಿವಿಧ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸರ್ಕಾರದ ಮಹತ್ವದ ಯೋಜನೆಗಳಾದ 5 ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಉದ್ದೇಶವನ್ನು ಸಮಾವೇಶ ಹೊಂದಿದೆ ಎಂದು ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ ಅವರು ಮಾಹಿತಿ ನೀಡಿದರು.

Exit mobile version