ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಫೆ.03: 2023-24ನೇ ಸಾಲಿನ ಮಕ್ಕಳ ವಿಶೇಷ ಗ್ರಾಮ ಸಭೆಯನ್ನು ಫೆಬ್ರವರಿ 6 ರಂದು ಬೆಳಿಗ್ಗೆ 11.30ಕ್ಕೆ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ.
ಮಕ್ಕಳ ಹಕ್ಕುಗಳ ಬಗ್ಗೆ ಚರ್ಚೆ, ಪ್ರತಿ 3 ವರ್ಷದಿಂದ 6 ವರ್ಷದ ಎಲ್ಲಾ ಮಕ್ಕಳ ಅಂಗನವಾಡಿ ಹಾಗೂ ಶಾಲೆಗಳಲ್ಲಿ ದಾಖಲಾsದ ಕ್ಷಣವನ್ನು ಪ್ರಾರಂಭಿಸುವುದು, ಅಧ್ಯಕ್ಷರ ಅಪ್ಪಣೆ ಮೇರೆಗೆ ಬಂದ ಇತರೆ ವಿಷಯಗಳ ಚರ್ಚೆಗಳನ್ನು ಗ್ರಾಮ ಸಭೆಯಲ್ಲಿ ಕೈಗೊಳ್ಳಲಾಗುತ್ತದೆ.
ಗ್ರಾಮ ಸಭೆಗೆ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶಿಕ್ಷಕರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಹಾಗೂ ಗ್ರಾಮದ ಸಾರ್ವಜನಿಕರು ಭಾಗವಹಿಸಬೇಕೆಂದು ಕರಡಿಕೊಪ್ಪ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಸವಿತಾ ಕಬ್ಬೇರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.