Site icon MOODANA Web Edition

ಎಸ್.ಎಸ್.ಎಲ್.ಸಿ ಪೂರ್ವ ಸಿದ್ದತಾ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು, ಫೆಬ್ರವರಿ 07 (ಕರ್ನಾಟಕ ವಾರ್ತೆ):

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪೂರ್ವ ಸಿದ್ದತಾ ಪರೀಕ್ಷೆಯನ್ನು ನಡೆಸಲು ಫೆಬ್ರವರಿ 26 ರಿಂದ ಮಾರ್ಚ್ 2 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ವೇಳಾಪಟ್ಟಿಯನ್ನು ಪ್ರಕಟಿಸಿದೆ. 
ಪ್ರಥಮ ಭಾಷೆ , ದ್ವಿತೀಯ ಭಾಷೆ , ತೃತೀಯ ಭಾಷೆಗಳು, ಗಣಿತ ಹಾಗೂ ಸಮಾಜ ವಿಜ್ಞಾನ ವಿಷಯಗಳನ್ನು ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಹಾಗೂ ಮಾರ್ಚ್ 01 ರಂದು ದ್ವಿತೀಯ ಪಿ.ಯು.ಸಿ ಪರೀಕ್ಷೆ ಇರುವುದರಿಂದ, ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕೆಲವು ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪರೀಕ್ಷಾ ಕೇಂದ್ರಗಳಾಗಿ ರಚಿಸಲಾಗಿರುತ್ತದೆ. ಈ ಶಾಲಾ/ಕಾಲೇಜುಗಳಲ್ಲಿಯೇ ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಬೇಕಾಗಿರುವುದರಿಂದ ದ್ವಿತೀಯ ಪಿ.ಯುಸಿ ಪರೀಕ್ಷೆಗೆ ತೊಂದರೆ ಉಂಟಾಗುವುದನ್ನು ಪರಿಗಣಿಸಿ ಮಾರ್ಚ್ 1 ರಂದು ನಡೆಯುವ  ಎಸ್.ಎಸ್.ಎಲ್.ಸಿ ವಿಜ್ಞಾನ ವಿಷಯದ ಪೂರ್ವ ಸಿದ್ಧತಾ ಪರೀಕ್ಷೆಯನ್ನು ಮಧ್ಯಾಹ್ನ 2 ಗಂಟೆಯಿಂದ ನಿಗದಿಪಡಿಸಲಾಗಿದೆ ಎಂದು  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version