ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಫೆ.08: ಪ್ರತಿ ವರ್ಷದಂತೆ ಈ ವರ್ಷವು ಫೆ.15 ರಂದು ತಹಶೀಲ್ದಾರ್ ಕಾರ್ಯಾಲಯದಲ್ಲಿ ಶ್ರೀ ಸಂತ ಸೇವಾಲಾಲ್ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಗುತ್ತದೆ ಎಂದು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಪ್ರಕಾಶ್ ನಾಶಿ ಹೇಳಿದರು.
ಇಂದು ತಹಶೀಲ್ದಾರ್ ಕಾರ್ಯಾಲಯದಲ್ಲಿ ನಡೆದ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಅಂದು ಸಾಯಂಕಾಲ 04 ಗಂಟೆಗೆ ಶ್ರೀ ಸಂತ ಸೇವಾಲಾಲ್ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ನೆರವೇರಿಸಲಾಗುವುದು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು.
ಸಭೆಯಲ್ಲಿ ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ್, ಸಮಾಜದ ಮುಖಂಡರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಇತರರು ಉಪಸ್ಥಿತರಿದ್ದರು.
ಶ್ರೀ ಸಂತ ಸೇವಾಲಾಲ್ ಜಯಂತಿ ಪೂರ್ವಭಾವಿ ಸಭೆ
