29.7 C
Karnataka
Thursday, March 19, 2026
spot_img

ಮಾ.23 ರಂದು ನೇರ ಸಂದರ್ಶನ

ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಮಾ.೧೮: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ವತಿಯಿಂದ ಗುಜ್ಜಾಡಿ ಸ್ವರ್ಣ ಜ್ಯುವೆಲ್ಲರ್ಸ್ ಪ್ರೆöÊವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನವನ್ನು ಮಾರ್ಚ ೨೩ ರಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೩ ಗಂಟೆಯವರೆಗೆ ಧಾರವಾಡದ ಪಿಬಿ ರಸ್ತೆಯಲ್ಲಿರುವ ಗುಜ್ಜಾಡಿ ಸ್ವರ್ಣ ಜ್ಯುವೆಲ್ಲರ್ಸ್ ಪ್ರೆöÊವೇಟ್ ಲಿಮಿಟೆಡ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಪದವಿ ಹಾಗೂ ಸ್ನಾತಕೋತ್ತರ ಪದವಿ ಪಾಸಾದ ೧೮ ರಿಂದ ೩೫ ವಯೋಮಿತಿ ಹೊಂದಿರುವ ಪುರುಷ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಯುವನಿಧಿ ಫಲಾನುಭವಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚಿಸಲಾಗಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಆಧಾರ ಕಾರ್ಡ, ಬಯೋಡಾಟಾ (ರೆಸ್ಯೂಮ) ಗಳ ಪ್ರತಿಗಳೊಂದಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಅಭ್ಯರ್ಥಿಗಳು https://forms.gle/KLwZQKiperuaEp1fA ವೆಬ್‌ಸೈಟ್ ಮುಖಾಂತರ ನೋಂದಣಿ ಮಾಡಿಕೊಂಡು ಸಂದರ್ಶನದಲ್ಲಿ ಭಾಗವಹಿಸಬೇಕು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0836-2225288, 6362923462 , 8453208555 ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

spot_img
spot_img
spot_img
spot_img
spot_img
spot_img

Related Articles

- Advertisement -spot_img

Latest Articles

error: Content is protected !!