ಬೆಂಗಳೂರು, ಮಾರ್ಚ್ 20, (ಕರ್ನಾಟಕ ವಾರ್ತೆ):
‘ವಚನ ಕಲ್ಯಾಣ’ ಎಂಬ ಅಹೋರಾತ್ರಿ (9 ಗಂಟೆಗಳ) ನಾಟಕವನ್ನು ಸಿದ್ಧಪಡಿಸಿ ರಾಜ್ಯಾದ್ಯಂತ ಪ್ರದರ್ಶಿಸಲು ಉದ್ದೇಶಿಸಲಾಗಿರುವ ಯೋಜನೆಯಲ್ಲಿ ಭಾಗವಹಿಸಲು ಆಸಕ್ತ ಮತ್ತು ಅನುಭವಿ ರಂಗಕಲಾವಿದರು ಹಾಗೂ ಗಾಯಕರಿಂದ ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 20 ರವರೆಗೆ ಅವಕಾಶವನ್ನು ಕಲ್ಪಿಸಲಾಗಿತ್ತು. ಈ ಅವಧಿಯನ್ನು ಮಾರ್ಚ್ 27 ರವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಆಸಕ್ತರು 18 ರಿಂದ 40 ವರ್ಷಗಳ ವಯೋಮಿತಿಯಲ್ಲಿರಬೇಕು. ರಂಗಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕಗಳಲ್ಲಿ ಅಭಿನಯಿಸಿದ ಕಲಾವಿದರಿಗೆ ಆದ್ಯತೆ ನೀಡಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳು 3 ತಿಂಗಳ ಕಾಲ ಪೂರ್ಣಕಾಲಿಕವಾಗಿ ತರಬೇತಿ ಮತ್ತು ಪ್ರದರ್ಶನಗಳಲ್ಲಿ ಪಾಲ್ಗೊಳ್ಳುವುದು ಕಡ್ಡಾಯವಾಗಿದೆ. ಆಯ್ಕೆಯಾದ ಕಲಾವಿದರಿಗೆ ಮಾಸಿಕ ಗೌರವಧನ ಹಾಗೂ ಊಟ-ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.
ಅರ್ಜಿ ನಮೂನೆಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ kannadasiri.karnataka.gov.in ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು 2026ನೇ ಮಾರ್ಚ್ 27 ರ ಒಳಗಾಗಿ ಸದಸ್ಯ ಕಾರ್ಯದರ್ಶಿ, ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು – 560056 ಇವರಿಗೆ ಸಲ್ಲಿಸುವುದು ಅಥವಾ ಇ-ಮೇಲ್: kanakaresearchcentre@gmail.com ಮೂಲಕವೂ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗಾಗಿ ವಚನ ಕಲ್ಯಾಣ ನಾಟಕದ ನಿರ್ದೇಶಕರಾದ ಸಿ. ಬಸವಲಿಂಗಯ್ಯ ಅವರ ಮೊಬೈಲ್ ಸಂಖ್ಯೆ: 9448538620 ಅನ್ನು ಸಂಪರ್ಕಿಸಬಹುದು. ಸಂದರ್ಶನಕ್ಕೆ ಹಾಜರಾಗುವ ಕಲಾವಿದರಿಗೆ ಇಲಾಖೆಯ ವತಿಯಿಂದ ಯಾವುದೇ ಭತ್ಯೆ ನೀಡಲಾಗುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









