ಹುಬ್ಬಳ್ಳಿ (ಕರ್ನಾಟಕವಾರ್ತೆ) ನ.21: 110 ಕೆವ್ಹಿ ವಿದ್ಯುತ್ ಉಪಕೇಂದ್ರ ನವಲಗುಂದದಲ್ಲಿ 3ನೇಯ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳತ್ತಿರುವುದರಿಂದ ನವೆಂಬರ್ 22 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 11ಕೆವ್ಹಿ ಮಾರ್ಗದ ನವಲಗುಂದ, ಅಳಗವಾಡಿ, ಯಮನೂರ, ಶಾನವಾಡ, ಕುಮಾರಕೊಪ್ಪ, ಇಬ್ರಾಹೀಂಪುರ, ಕಡದಳ್ಳಿ, ಅಮರಗೋಳ, ಸೊಟಕನಾಳ, ಶಲವಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.