ಬೆಂಗಳೂರು, ನವೆಂಬರ್ 27 (ಕರ್ನಾಟಕ ವಾರ್ತೆ):
ಕನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವತಿಯಿಂದ “Basics and Real-world Applications of UAVs and Drones” ವಿಷಯದ ಕುರಿತು ಡಿಸೆಂಬರ್ 6 ರಿಂದ 8 ರವರೆಗೆ ಮೂರು ದಿನಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿ, ಪ್ರೊ. ಯು. ಆರ್. ರಾವ್ ವಿಜ್ಞಾನ ಭವನ, ಜಿ.ಕೆ.ವಿ.ಕೆ. ಆವರಣ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ವಿದ್ಯಾರಣ್ಯಪುರ ಪೋಸ್ಟ್, ಬೆಂಗಳೂರು ಇಲ್ಲಿ ಆಯೋಜಿಸಲಾಗಿದೆ.
ಕಾರ್ಯಾಗಾರದಲ್ಲಿ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, 35 ವರ್ಷ ವಯೋಮಿತಿ ಮೀರದ ನಿರುದ್ಯೋಗಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಡಿಪೆÇ್ಲೀಮಾ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಆಸಕ್ತ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು, ಉಚಿತ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಮೊದಲು ನೊಂದಾಯಿಸಿಕೊಂಡವರಿಗೆ ಆದ್ಯತೆ ನೀಡಲಾಗುವುದು.
ಕಾರ್ಯಾಗಾರದಲ್ಲಿ ಭಾಗವಹಿಸಲಿಚ್ಛಿಸುವ ವಿದ್ಯಾರ್ಥಿಗಳು ಡಿಸೆಂಬರ್ 2 ರೊಳಗೆ Google form (https://forms.gle/fBWXpnoczCTd3ZDFA) ನೋಂದಾಯಿಸಿ ಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ವೈಜ್ಞಾನಿಕಾಧಿಕಾರಿಯವರನ್ನು ಮೊ: 9743084194 ಅಥವಾ ಅಕಾಡೆಮಿಯ ವೆಬ್ ಸೈಟ್ www.kstacademy.in ಗೆ ವೀಕ್ಷಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.