21.2 C
Karnataka
Friday, February 7, 2025
spot_img

ಪಿಂಚಣಿದಾರರ ಮನೆ ಬಾಗಿಲಿನಲ್ಲಿ ಡಿಜಿಟಲ್ ಲೈಪ್ ಪ್ರಮಾಣಪತ್ರ ಸಲ್ಲಿಸಲು ವ್ಯವಸ್ಥೆ

ಬೆಂಗಳೂರು, ನವೆಂಬರ್ 29 (ಕರ್ನಾಟಕ ವಾರ್ತೆ):

ಕರ್ನಾಟಕ ರಾಜ್ಯ ಸರ್ಕಾರದ ಪಿಂಚಣಿದಾರರಿಗೆಕುಟುಂಬ ಪಿಂಚಣಿದಾರರಿಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್ (ಡಿಎಲ್‍ಸಿ) ಸೇವೆಗಳನ್ನು ಸುಲಭವಾಗಿ ಒದಗಿಸಲು, ಕರ್ನಾಟಕ ರಾಜ್ಯ ಸರ್ಕಾರದ ಖಜಾನೆ ಆಯುಕ್ತರೊಂದಿಗೆ ಭಾರತೀಯ ಅಂಚೆ ಇಲಾಖೆಯ ಅಡಿಯಲ್ಲಿ ಬರುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಎಂಒಯುಗೆ ಸಹಿ ಹಾಕಿದೆ. ತಿಳುವಳಿಕೆ ಪತ್ರದ (ಎಂಒಯು) ಅಡಿಯಲ್ಲಿ, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನವೆಂಬರ್ 1 ರಿಂದ 30 ರವರೆಗಿನ ಮಸ್ಟರಿಂಗ್ ಅವಧಿಯಲ್ಲಿ 5.4 ಲಕ್ಷಕ್ಕೂ ಅಧಿಕ ಕರ್ನಾಟಕ ಸರಕಾರದ ಪಿಂಚಣಿದಾರರು/ಕುಟುಂಬ ಪಿಂಚಣಿದಾರರಿಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಸೇವೆಗಳನ್ನು ಒದಗಿಸುತ್ತದೆ.

ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸಲು, ಭಾರತೀಯ ಅಂಚೆ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ “ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್”, ಪಿಂಚಣಿದಾರರ ಮನೆ ಬಾಗಿಲಿನಲ್ಲಿ, ಡಿಜಿಟಲ್ ಲೈಫ್ ಪ್ರಮಾಣಪತ್ರವನ್ನು ಸಲ್ಲಿಸಲು ವ್ಯವಸ್ಥೆ ಮಾಡಿದೆ.

 ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣಪತ್ರವನ್ನು ಕೆಲವೇ ನಿಮಿಷಗಳಲ್ಲಿ ಪೋಸ್ಟ್ ಮ್ಯಾನ್ ಮೂಲಕ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಒ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬಯೋಮೆಟ್ರಿಕ್ (ಬೆರಳಚ್ಚು) ವೆರಿಫೈ ಮಾಡಿ ಸಲ್ಲಿಸಬಹುದು.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಅನ್ನು ಸೆಪ್ಟೆಂಬರ್ 01, 2018 ರಂದು ರಾಷ್ಟ್ರವ್ಯಾಪಿ ಪ್ರಾರಂಭಿಸಲಾಯಿತು. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‍ನ ಸೇವೆಗಳು ಈಗಾಗಲೇ ಸೇರ್ಪಡೆಗೊಂಡಿರುವ 8 ಕೋಟಿಗೂ ಹೆಚ್ಚು ಗ್ರಾಹಕರಿಗೆ ಹಾಗೂ ಇನ್ನಿತರರಿಗೆ, ದೇಶಾದ್ಯಂತ 1,36,000 ಅಂಚೆ ಕಚೇರಿಗಳ ಮೂಲಕ ಲಭ್ಯವಿದೆ. ಕರ್ನಾಟಕದಲ್ಲಿ  ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ 31 ಶಾಖೆಗಳನ್ನು ಹೊಂದಿದ್ದು, ಅದರ ಜೊತೆಗೆ 9500 ಕ್ಕೂ ಹೆಚ್ಚು ಪೋಸ್ಟ್ ಮ್ಯಾನ್‍ಗಳು ಅವರ ದೈನಂದಿನ ಡೆಲಿವರಿ ಬೀಟ್‍ನಲ್ಲಿ ಬ್ಯಾಂಕಿಂಗ್ ಸೇವೆಗಳನ್ನು ನೀಡಲು ಸ್ಮಾರ್ಟ್ ಫೋನ್ ಮತ್ತು ಬಯೋಮೆಟ್ರಿಕ್ ಸಾಧನಗಳನ್ನು ಹೊಂದಿದ್ದಾರೆ.

ಕರ್ನಾಟಕ ಸರ್ಕಾರದ ಪಿಂಚಣಿದಾರರು/ಕುಟುಂಬ ಪಿಂಚಣಿದಾರರು ತಮ್ಮ ಹತ್ತಿರದ ಅಂಚೆ ಕಛೇರಿಯಲ್ಲಿ ಅಥವಾ ಪೋಸ್ಟ್ ಮೂಲಕ ಕೇವಲ ರೂ.70/- (ಜಿಎಸ್‍ಟಿ ಸೇರಿದಂತೆ) ಶುಲ್ಕನೀಡಿ ಈ ಸೌಲಭ್ಯವನ್ನು ಪಡೆದು ತಮ್ಮ ಡಿಜಿಟಲ್ ಲೈಫ್ ಪ್ರಮಾಣಪತ್ರವನ್ನು ಸಲ್ಲಿಸುವಂತೆ ಅಧಿಕೃತ ಪ್ರಕಟಣೆ ತಿಳಿಸಿದೆ.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Related Articles

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!