25 C
Karnataka
Sunday, March 22, 2026
spot_img

ಸಂವಿಧಾನದ ಮೂಲ ಆಶಯಗಳಡಿ ನಡೆಯುವ ಯಾವುದೇ ಚಟುವಟಿಕೆಗಳನ್ನು ತಡೆಯುವುದಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಡಿಸೆಂಬರ್ 01 (ಕರ್ನಾಟಕ ವಾರ್ತೆ) :
ರಾಜ್ಯ ಸರ್ಕಾರವು ಸಂವಿಧಾನದ ಮೂಲ ಆಶಯಗಳಡಿ ನಡೆಸುವ ಚಟುವಟಿಕೆಗಳನ್ನು ನಿಲ್ಲಿಸುವ ಅಥವಾ ತಡೆಯುವ ಯಾವುದೇ ಕೆಲಸವನ್ನು ಮಾಡುವುದಿಲ್ಲ. ಕಥೆ, ಕಾವ್ಯ, ನಾಟಕ, ಸಂಗೀತ ಮುಂತಾದ ಸೃಜನಶೀಲ ಅಭಿವ್ಯಕ್ತಿಯನ್ನು ಯಾವುದೇ ಕಾರಣಕ್ಕೂ ತಡೆಯುವ ಕೆಲಸವನ್ನು ಮಾಡುವುದಿಲ್ಲ. ನಾವು ಸಂವಿಧಾನದ ಮೂಲಸ್ಪೂರ್ತಿಗೆ ವಿರುದ್ಧವಾಗದಂತೆ ನಡೆಯುವ ಎಲ್ಲ ಅಭಿವ್ಯಕ್ತಿಗಳ ಪರವಾಗಿದ್ದೇವೆ. ಕೆಳಹಂತದ ಪೆÇಲೀಸ್ ಅಧಿಕಾರಿಗಳ ತಪ್ಪು ತಿಳಿವಳಿಕೆಯ ಕಾರಣಕ್ಕೆ ಒಂದೆರಡು ಅನಾವಶ್ಯಕವಾದ ಗೊಂದಲಗಳು ನಿರ್ಮಾಣವಾಗಿವೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಯಾವುದೇ ಗೊಂದಲಗಳು ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕೆಂದು ಪೆÇಲೀಸ್ ಮಹಾನಿರ್ದೇಶಕರಿಗೆ ಸೂಕ್ತ ಸೂಚನೆಗಳನ್ನು ನೀಡಿರುತ್ತೇನೆ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸಗಳ ಜೊತೆ ಸರ್ಕಾರವು ಸದಾ ನಿಲ್ಲುತ್ತದೆ ಎಂಬುದನ್ನು ತಿಳಿಸಬಯಸುತ್ತೇನೆ. ಆದ್ದರಿಂದ ಯಾವುದೇ ರೀತಿಯ ಗೊಂದಲಗಳನ್ನು ಸೃಷ್ಟಿಸಬಾರದೆಂದು, ಅಭಿವ್ಯಕ್ತಿ ಸ್ವಾತಂತ್ರ್ಯದ ವಿಚಾರದಲ್ಲಿ ಆತಂಕಿತರಾಗಬಾರದೆಂದು ನಾಡಬಾಂಧವರಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ವಿನಂತಿಸಿದ್ದಾರೆ.

spot_img
spot_img
spot_img
spot_img
spot_img
spot_img

Related Articles

- Advertisement -spot_img

Latest Articles

error: Content is protected !!