ಬೆಂಗಳೂರು, ಡಿಸೆಂಬರ್ 28 (ಕರ್ನಾಟಕ ವಾರ್ತೆ):
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಲಾಗಿರುವ ಉಳಿಕೆ ಮೂಲ ವ್ಯವದ ಕಾರ್ಮಿಕ ಇಲಾಖೆಯಲೆಯಲ್ಲಿನ ಕಾರ್ಮಿಕ ನಿರೀಕ್ಷಕರ 20 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಡಿಸೆಂಬರ್ 27 ರಂದು ಆಯೋಗದ ಜಾಲತಾಣದಲ್ಲಿ http://kpsc.kar.nic.in ನಲ್ಲಿ ಪ್ರಕಟಿಸಿದೆ.
ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದ ದಿನಾಂಕದಿಂದ 07 ದಿನಗಳ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕ ಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-01 ಇವರಿಗೆ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಬಹುದು. 07 ದಿನಗಳ ನಂತರ ಸಲ್ಲಿಸುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಕೆ.ಎಸ್.ಲತಾಕುಮಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.