23.5 C
Karnataka
Thursday, February 6, 2025
spot_img

ಕೋವಿಡ್ -19 ಉಪತಳಿ ಜೆಎನ್.1 ವರದಿಯಾಗಿರುವ ಹಿನ್ನೆಲೆ ಬೆಂಗಳೂರು ನಗರದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳ ಪಾಲನೆಗೆ ಮನವಿ – ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು, ಡಿಸೆಂಬರ್ 27(ಕರ್ನಾಟಕ ವಾರ್ತೆ):

ಕರ್ನಾಟಕವೂ ಸೇರಿದಂತೆ, ದೇಶದ ಇತರ ರಾಜ್ಯಗಳಲ್ಲಿ ವರದಿಯಾಗುತ್ತಿರುವ ಕೋವಿಡ್-19, ಓಮಿಕ್ರಾನ್ ನ ಉಪತಳಿಯಾದ ಜೆಎನ್.1 ರ 34 ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಪಾಲಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಅಗತ್ಯ ಮಾರ್ಗಸೂಚಿಗಳು, ಸುತ್ತೋಲೆಗಳು ಹಾಗೂ ಸಲಹಾ ಪತ್ರವನ್ನು ಹೊರಡಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಲಭ್ಯವಿರುವ ಮಾಹಿತಿಯ ಅನ್ವಯ, ಜೆಎನ್.1 ಉಪತಳಿಯು ಹೆಚ್ಚು ಹರಡುವಿಕೆಯ (High Transmissibility) ಸಾಮಥ್ರ್ಯವನ್ನು ಹೊಂದಿದೆ. ಪರಿಣಾಮವಾಗಿ ವ್ಯದ್ಯರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರವವರು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಗಳು ಹೆಚ್ಚಿವೆ.

ಪ್ರಸ್ತುತ ರಾಜ್ಯದಲ್ಲಿ, ಡಿಸೆಂಬರ್ 26 ರ ವರೆಗೆ 464 ಸಕ್ರಿಯ ಕೋವಿಡ್ ಪ್ರಕರಣಗಳ ಪೈಕಿ 376 ಪ್ರಕರಣಗಳು ಬೆಂಗಳೂರು ನಗರದಲ್ಲಿ ವರದಿಯಾಗಿವೆ. ಒಟ್ಟು 74 ಖಚಿತ ಕೋವಿಡ್ ಪ್ರಕರಣಗಳಲ್ಲಿ 57 ಪ್ರಕರಣಗಳು ಮತ್ತು 9 ಮರಣ ಪ್ರಕರಣಗಳಲ್ಲಿ 4 ಮರಣ ಪ್ರಕರಣಗಳು, ಬೆಂಗಳೂರು ನಗರಕ್ಕೆ ಸೇರಿವೆ. ರಾಜ್ಯದಲ್ಲಿ ಈವರೆಗೆ ವರದಿಯಾಗಿರುವ 34 ಜೆಎನ್.1 ಪ್ರಕರಣಗಳ ಪೈಕಿ 21 ಜೆಎನ್.1 ಪ್ರಕರಣಗಳು ಬೆಂಗಳೂರು ನಗರದ್ದಾಗಿದೆ.

ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ, ಮುಂಬರುವ ಹೊಸ ವμರ್Áಚರಣೆಯ ಸಂದರ್ಭದಲ್ಲಿ ಜನಸಂದಣಿ ಪ್ರದೇಶಗಳನ್ನು ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಜನಸಂದಣಿಯಾಗುವುದನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಸಾರ್ವಜನಿಕರು ಮುಂಜಾಗೃತಾ ಕ್ರಮವಾಗಿ ಅoviಜ ಂಠಿಠಿಡಿoಠಿಡಿiಚಿಣe ಃehಚಿviouಡಿ (ಅಂಃ) ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಹ್ಯಾಂಡ್ ಸ್ಯಾನಿಟೈಸರ್ ಬಳಸುವುದರ ಬಗ್ಗೆ ಅರಿವು ಮೂಡಿಸುವುದು.

ಈಗಾಗಲೇ ಸಾರ್ವಜನಿಕರಿಗೆ ಸಲಹಾ ಪತ್ರದಲ್ಲಿ ತಿಳಿಸಿರುವಂತೆ, 60 ವರ್ಷ ಮೇಲ್ಪಟ್ಟವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮಾಸ್ಕ್ ಧರಿಸುವುದನ್ನು ಪುನರುಚ್ಚರಿಸಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Related Articles

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!