ಹುಬ್ಬಳ್ಳಿ (ಕರ್ನಾಟಕವಾರ್ತೆ) ಡಿ.29: ಜಾತಿ, ಧರ್ಮ, ಭಾಷೆಗಳನ್ನು ಮೀರಿದ ವ್ಯಕ್ತಿತ್ವ ಕುವೆಂಪು ಅವರದಗಿತ್ತು, ಇಂದಿನ ಯುವ ಪೀಳಿಗೆಯು ಅವರ ಸಾಹಿತ್ಯ ಮತ್ತು ಹಿನ್ನೆಲೆಯನ್ನು ಅರಿತುಕೊಳ್ಳುವುದು ಮಹತ್ವಪೂರ್ಣವಾದದ್ದಾಗಿದೆ ಎಂದು ಹುಬ್ಬಳ್ಳಿ ನಗರ ತಹಸೀಲ್ದಾರ ಕಲಗೌಡ್ರ ಪಾಟೀಲ ಹೇಳಿದರು.
ಇಂದು ಕುವೆಂಪು ಅವರ ಜನ್ಮದಿನದ ಅಂಗವಾಗಿ ಹುಬ್ಬಳ್ಳಿ ತಾಲೂಕು ಆಡಳಿತ ವತಿಯಿಂದ ತಹಸೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಾನವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕರ್ನಾಟಕ ಸರ್ಕಾರವು ಕಳೆದ 5 ವರ್ಷಗಳಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನವನ್ನು ವಿಶ್ವ ಮಾನವ ದಿನಾಚರಣೆಯೆಂದು ಆಚರಿಸುತ್ತಾ ಬಂದಿದೆ. ಕುವೆಂಪು ಅವರು ಕನ್ನಡ ನವೋದಯ ಸಾಹಿತ್ಯ ಕಾಲಘಟ್ಟದ ಪ್ರಮುಖ ಕವಿಗಳಾಗಿದ್ದು, ಕುವೆಂಪು ಅವರು ಸಣ್ಣ ಕಥೆಗಳು, ಕಾವ್ಯ, ಕವನ, ಕಾದಂಬರಿ, ನಾಟಕ, ಆತ್ಮ ಕಥನ, ಬಾಲ ಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ಶ್ರೀರಾಮಾಯನ ದರ್ಶಣಂ ಕೃತಿಗೆ 1967 ರಲ್ಲಿ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ. ವಿದ್ಯಾರ್ಥಿಗಳು ಸಾಹಿತ್ಯ ಮತ್ತು ಇತಿಹಾಸದತ್ತ ಗಮನಹರಿಸುವ ಮೂಲಕ ನಮ್ಮ ಮೂಲ ಸಂಸ್ಕøತಿ, ಪರಂಪರೆಯನ್ನು ಜೀವಂತಗೊಳಿಸಬೇಕಿದೆ ಎಂದರು.
ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರರಾದ ಪ್ರಕಾಶ ನಾಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಸಿ ಮಾತನಾಡಿ ಕುವೆಂಪು ಅವರು ನಮ್ಮ ನಾಡಿಗೆ ನೀಡಿದ ಕೊಡುಗೆ ಅಪಾರವಾದ್ದು, ಇಂದು ಅವರ ಜನ್ಮ ದಿನಾಚರಣೆಯನ್ನು ವಿಶ್ವಮಾನವ ಜಯಂತಿಯನ್ನಾಗಿ ಹುಬ್ಬಳ್ಳಿ ತಾಲೂಕಾಡಳಿತ ವತಿಯಿಂದ ತುಂಬಾ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಮಕ್ಕಳು ಕುವೆಂಪು ಅವರ ಸಾಹಿತ್ಯವನ್ನು ಓದಬೇಕು, ಓದಿನ ಮಹತ್ವ ತಿಳಿಯಬೇಕು, ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದು ನುಡಿದರು.
ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ ಮಾತನಾಡಿ ರಾಷ್ಟ್ರಕವಿ ಕುವೆಂಪು ಅವರು ತಮ್ಮ ಸಾಹಿತ್ಯದ ಮೂಲಕ ಸಮಾಜದಲ್ಲಿನ ಮೌಢ್ಯಾಚರಣೆ, ಅಸ್ಪøಶ್ಯತೆಯನ್ನು ತೊಡೆದು ಹಾಕಲು ಶ್ರಮಿಸಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಾದ ಪಲ್ಲವಿ ಚಾಕಲಬ್ಬಿ, ಸುವರ್ಣಾ ಕಟ್ನೂರಮಠ, ರಾಯಣ್ಣ ಚಾಕಲಬ್ಬಿ, ಸಿಂಧೂ ಸಾಲಿಮಠ, ಖುಷಿ ಕಲ್ಲಣ್ಣವರ, ಸಿದ್ಧಾರ್ಥಗೌಡ ಪಾಟೀಲ ಕುವೆಂಪು ಅವರ ಕವನ ವಾಚನ ಮಾಡಿದರು. ಈ ಸಂದರ್ಭದಲ್ಲಿ ಕವನ ವಾಚನ ಮಾಡಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಶಿಕ್ಷಣ ಸಂಯೋಜಕರಾದ ಎಮ್.ಜೆ.ಜಡಿಮಠ ಅವರು ಕಾರ್ಯಕ್ರಮದಲ್ಲಿ ಸ್ವಾಗತಿಸಿ, ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ನವ ನಿರ್ಮಾಣ ವೇದಿಕೆಯ ರಾಜ್ಯಾಧ್ಯಕ್ಷರಾದ ಈರಪ್ಪ.ಕೆ.ಎಮ್ಮಿ, ಮಕ್ಕಳ ಸಾಹಿತ್ಯ ಪರಿಷತ್ತು, ಕರ್ನಾಟಕ ಸಂಗ್ರಾಮ ಸೇನೆಯ ಜಿಲ್ಲಾಧ್ಯಕ್ಷ ಸಂಜೀವ ದುಮಕನಾಳ, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.