ಬೆಂಗಳೂರು, ಜನವರಿ 07 (ಕರ್ನಾಟಕ ವಾರ್ತೆ):
ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವು 2023-24 ನೇ ಸಾಲಿನಲ್ಲಿ Environmental Science, Basic Geological Studies and Research Methodology and Intellectual Property (ತಾಂತ್ರಿಕೇತರ) ವಿಷಯಗಳನ್ನು ಬೋಧನೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಹಾಗೂ ಸಂಬಂಧಿಸಿದ ಮಾಹಿತಿಗಳನ್ನು ವಿಶ್ವವಿದ್ಯಾಲಯದ ಜಾಲತಾಣ www.uvce.ac.in ನಿಂದ ಡೌನ್‍ಲೋಡ್ ಮಾಡಿಕೊಂಡು ಸೂಕ್ತ ದಾಖಲೆಗಳ ಪ್ರತಿಗಳೊಂದಿಗೆ ಜನವರಿ 10 ಸಂಜೆ 5 ಗಂಟೆಯೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ, ಕುಲಸಚಿವರ ಕಚೇರಿ, ಕೆ.ಆರ್.ವೃತ್ತ, ಬೆಂಗಳೂರು-01 ಇಲ್ಲಿ ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.