ಹುಬ್ಬಳ್ಳಿ ( ಕರ್ನಾಟಕ ವಾರ್ತೆ) ಫೆ.5: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ರಾಷ್ಟ್ರೀಯ ರಸ್ತೆ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಫೆಬ್ರವರಿ 6 ರಂದು ಮಧ್ಯಾಹ್ನ 12.30 ಗಂಟೆಗೆ ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಉಪ ಸಾರಿಗೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.