20.9 C
Karnataka
Wednesday, February 5, 2025
spot_img

ನೃಪತುಂಗ ವಿಶ್ವವಿದ್ಯಾಲಯದಲ್ಲಿ ವಿವಿಧ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಡಿಸೆಂಬರ್ 31, (ಕರ್ನಾಟಕ ವಾರ್ತೆ) :

ನೃಪತುಂಗ ವಿಶ್ವವಿದ್ಯಾಲಯದಲ್ಲಿ ಕಚೇರಿ ಸಹಾಯಕರ 04 ಹುದ್ದೆ, ಲೆಕ್ಕ ಸಹಾಯಕರ 01 ಹುದ್ದೆ ಮತ್ತು ಗ್ರಂಥಾಲಯ ಸಹಾಯಕರ 01 ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕಚೇರಿ ಸಹಾಯಕರ ಹುದ್ದೆಗೆ, ಯಾವುದೇ ಪದವೀಧರರಾಗಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಬೆರಳಚ್ಚು ತಿಳಿದವರಾಗಿರಬೇಕು. ಕನಿಷ್ಠ ಎರಡು ವರ್ಷಗಳ ಸೇವಾನುಭವ ಹೊಂದಿರಬೇಕು.

ಲೆಕ್ಕ ಸಹಾಯಕರ ಹುದ್ದೆಗೆ, ಬಿ.ಕಾಂ ಅಥವಾ ಎಂ.ಕಾಂ ಪದವೀಧರರಾಗಿರಬೇಕು. ಟ್ಯಾಲಿ, ಕನ್ನಡ ಮತ್ತು ಆಂಗ್ಲ ಬೆರಳಚ್ಚು ತಿಳಿದವರಾಗಿರಬೇಕು. ಕನಿಷ್ಠ ಎರಡು ವರ್ಷಗಳ ಸೇವಾನುಭವ ಹೊಂದಿರಬೇಕು.
ಗ್ರಂಥಾಲಯ ಸಹಾಯಕರ ಹುದ್ದೆಗೆ, ಯಾವುದೇ ಪದವೀಧರರಾಗಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಕನ್ನಡ ಮತ್ತು ಆಂಗ್ಲ ಬೆರಳಚ್ಚು ತಿಳಿದವರಾಗಿರಬೇಕು. ಕನಿಷ್ಠ ಎರಡು ವರ್ಷಗಳ ಸೇವಾನುಭವ ಹೊಂದಿರಬೇಕು.

ಈ ಎಲ್ಲಾ ಹುದ್ದೆಗಳಿಗೆ ಕಾರ್ಮಿಕ ಕಾಯ್ದೆಯನ್ವಯ ಸರ್ಕಾರದ ನಿಯಮಾನುಸಾರ ಕನಿಷ್ಠ ವೇತನ ನಿಗಧಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು 2025ನೇ ಜನವರಿ 7 ಕೊನೆಯ ದಿನವಾಗಿರುತ್ತದೆ. 2025ನೇ ಜನವರಿ 10ರಂದು ನೇರ ಸಂದರ್ಶನ ನಡೆಸಲಾಗುವುದು. ಅರ್ಜಿಯನ್ನು ಜಾಲತಾಣ https://nublr.karnataka.gov.in ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು.

ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲಾ ಮೂಲ ದಾಖಲೆಗಳು ಹಾಗೂ ಎಲ್ಲಾ ದಾಖಲೆಗಳ ಎರಡು ಜೆರಾಕ್ಸ್ ಪ್ರತಿಗಳು ಹಾಗೂ 2 ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ, ಕುಲಸಚಿವರು, ನೃಪತುಂಗ ವಿಶ್ವದ್ಯಾಲಯ, ನೃಪತುಂಗ ರಸ್ತೆ, ಬೆಂಗಳೂರು -560 001 ಇಲ್ಲಿಗೆ ಕಳುಹಿಸಬೇಕು.

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗುವುದು. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಭತ್ಯೆಗಳನ್ನು ನೀಡಲಾಗುವುದಿಲ್ಲ. ಈ ನೇಮಕಾತಿಯು ಸಂಪೂರ್ಣವಾಗಿ ತಾತ್ಕಾಲಿಕವಾಗಿರುವುದರಿಂದ ಯಾವುದೇ ಸಂದರ್ಭದಲ್ಲಿ ಯಾವುದೇ ಕಾರಣ ತಿಳಿಸದೇ ಕರ್ತವ್ಯದಿಂದ ತೆಗದುಹಾಕುವ ಅಧಿಕಾರ ನೃಪತುಂಗ ವಿಶ್ವವಿದ್ಯಾಲಯಕ್ಕೆ ಇರುತ್ತದೆ. ನೃಪತುಂಗ ವಿಶ್ವವಿದ್ಯಾಲಯದಲ್ಲಿ ನೇರ ನೇಮಕಾತಿಗಾಗಿ ಯಾವುದೇ ತರಹದ ಹಕ್ಕಿಗೆ ಒಳಪಟ್ಟಿರುವುದಿಲ್ಲ ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Related Articles

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!