ಬೆಂಗಳೂರು, ಡಿಸೆಂಬರ್ 31 (ಕರ್ನಾಟಕ ವಾರ್ತೆ):
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್), ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಮಾನಸಿಕ ಆರೋಗ್ಯ ಮತ್ತು ನರ ರೋಗಗಳ ಬಗ್ಗೆ ನುರಿತ ವೈದ್ಯರಿಂದ ಉಪನ್ಯಾಸಗಳನ್ನು ಹಮ್ಮಿಕೊಂಡಿದೆ.
ಈ ಉಪನ್ಯಾಸಗಳು ಜನವರಿ ಮಾಹೆಯಿಂದ ಸೆಪ್ಟೆಂಬರ್ ಮಾಹೆಯವರೆಗೆ ಪ್ರತಿ ಬುಧವಾರ ಬೆಳಿಗ್ಗೆ 7.15 ರಿಂದ 7.30ರವರೆಗೆ ಎಫ್ ಎಂ ರೈನ್‍ಬೋ ಬೆಂಗಳೂರು – 101.3 ಊz ನಲ್ಲಿ ಪ್ರಸಾರ ಮಾಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.