21.4 C
Karnataka
Tuesday, March 17, 2026
spot_img

ಕುಂದಗೋಳ : ಮಾ.24 ರಂದು ಡಾ.ಬಾಬು ಜಗಜೀವನರಾಮ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ

ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಮಾ.೧೭: ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ಮಾರ್ಚ್ 24 ರಂದು ಬೆಳಿಗ್ಗೆ 10.30 ಕ್ಕೆ ಕುಂದಗೋಳದ ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ತಾಲೂಕು ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು, ವಿವಿಧ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಸಾರ್ವಜನಿಕರು ಹಾಜರಾಗಿ ಸಲಹೆ ಸೂಚನೆಗಳನ್ನು ನೀಡುವಂತೆ ಕುಂದಗೋಳದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹುಬ್ಬಳ್ಳಿ : ಪೂರ್ವಭಾವಿ ಸಭೆ

ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಮಾ.೧೭: ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ತಾಲೂಕು ಆಡಳಿತದಿಂದ ಆಚರಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಜರುಗಿತು.

ಹುಬ್ಬಳ್ಳಿ ಶಹರ ತಹಶೀಲ್ದಾರ ಮಹೇಶ್ ಭಗವಂತ ಗಸ್ತೆ ಹಾಗೂ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಜೆ.ಬಿ. ಮಜ್ಜಗಿ ಅಧ್ಯಕ್ಷತೆ ವಹಿಸಿದ್ದರು.

ತಾಲೂಕು ಪಂಚಾಯಿತಿ ಇಒ ಡಾ.ರಾಮಚಂದ್ರ ಹೊಸಮನಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಎಂ.ಬಿ.ಸಣ್ಣೇರಿ, ಸಮಾಜದ ಮುಖಂಡರಾದ ಗಂಗಾಧರ್ ಪೆರುರ್, ಶಂಕರ್ ಅಜಮನಿ, ಇಂದುಮತಿ, ಶಿವಶಂಕರ್ ಭಂಡಾರಿ, ರಮೇಶ್ ವಡ್ಡಪಲ್ಲಿ, ಮಂಜುಳಾ ಬೆಣಗಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಸಾರ್ವಜನಿಕರು ಇದ್ದರು.

spot_img
spot_img
spot_img
spot_img
spot_img

Related Articles

- Advertisement -spot_img

Latest Articles

error: Content is protected !!